Thursday, 11th August 2022

ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ನಿಧನ

ಧಾರವಾಡ: ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ(95) ಅವರು ಧಾರವಾಡದ ರಜತಗಿರಿ ನಿವಾಸದಲ್ಲಿ ಬುಧವಾರ ನಿಧನರಾದರು.

ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ ಲಕ್ಷ್ಮೀಬಾಯಿ ಅವರು ಹಲವು ನಾಟಕ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಸಿಂಗಾರವ್ವ ಸಿನಿಮಾದಲ್ಲಿ ಅಭಿನಯಿಸಿದ್ದ ತಾಯಿ ಪಾತ್ರ ಗಮನ ಸೆಳೆದಿತ್ತು. ಲಕ್ಷ್ಮೀಬಾಯಿ ಅವರು ಹಿರಿಯ ನಟ ದಿ. ನಟರಾಜ್ ಏಣಗಿ ಅವರ ತಾಯಿ.

ಹೊಸಯಲ್ಲಾಪುರದ ರುದ್ರಭೂಮಿಯಲ್ಲಿ ಮಧ್ಯಾಹ್ನ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.