Tuesday, 17th May 2022

ಇಂಜಿನಿಯರಿಂಗ್ ಕಾಲೇಜ್’ನ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ಭಾನುವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸೌರವ್,  ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ನನ್ನ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗುತ್ತಿದೆ. ಕೆಲಸ ಸಿಗುತ್ತ ದೆಯೋ ಗೊತ್ತಿಲ್ಲ, ಸಾಲ ಮಾಡಿ ಶಿಕ್ಷಣ ಮಾಡುತ್ತಿದ್ದೇನೆ ಎಂದು ತಂದೆಗೆ ತಿಳಿಸುವಂತೆ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಹೇಳಿದ್ದಾರೆ.

ಬೆಳಗ್ಗೆ ಬಾಗಿಲು ತೆಗೆಯದ ಹಿನ್ನಲೆಯಲ್ಲಿ , ಕಿಟಕಿಯಿಂದ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಕೂಡಲೇ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಹತ್ತನೇ ತರಗತಿಯಲ್ಲಿ ಇರುವಾಗಲೂ ಸೌರವ್ ಆತ್ಮಹತ್ಯೆ ಯತ್ನ ಮಾಡಿದ್ದ ಎಂದು ತಿಳಿದು ಬಂದಿರುವುದಾಗಿ ನಗರ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಹೇಳಿದ್ದಾರೆ.

ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ಸಹಕಾರದಿಂದ ಪೋಷಕರನ್ನು ಕರೆಸಿಕೊಂಡು ಮೃತದೇಹ ವನ್ನ ಪಾಟ್ನಾ ಗೆ ತೆಗೆದುಕೊಂಡು ಹೋಗುವ ವ್ಯವಸ್ಥೆ ಮಾಡಲಾಗಿದೆ.