Sunday, 25th September 2022

ಎಕ್ಸೈಸ್‌ ಸುಂಕ ಕಡಿತವು ಮೋದಿಯವರ ದೀಪಾವಳಿ ಗಿಫ್ಟ್: ಶಾ ಟ್ವೀಟ್

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕ ಕಡಿಮೆ ಮಾಡಿ ರುವುದು ಪ್ರಧಾನಿ ನರೇಂದ್ರ ಮೋದಿ ತೆಗೆದು ಕೊಂಡಿರುವ ಪ್ರಮುಖ ನಿರ್ಧಾರ ವಾಗಿದೆ. ಈ ಕ್ರಮ ಹಣದುಬ್ಬರವನ್ನು ಕಡಿಮೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಹೇಳಿದರು.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಕ್ರಮವಾಗಿ ₹ 5 ಹಾಗೂ ₹ 10 ಕಡಿಮೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಗಿಫ್ಟ್ ನೀಡಿದ್ದಾರೆ ಟ್ವೀಟ್‌ ಮಾಡಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಹೆಚ್ಚಾಗುತ್ತಿದ್ದರೂ, ತೈಲೋತ್ಪನ್ನಗಳ ಮೇಲಿನ ಎಕ್ಸೈಸ್‌ ಸುಂಕ ಕಡಿಮೆ ಮಾಡುವಂಥ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿರುವುದಕ್ಕಾಗಿ ನಾನು ಮೋದಿ ಅವರಿಗೆ ಧನ್ಯವಾದ ಅರ್ಪಿಸು ತ್ತೇನೆ ಎಂದು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.