Sunday, 14th August 2022

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ: ಓರ್ವನ ಸಾವು

ಮಂಡ್ಯ: ಟಿಪ್ಪರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ನಾಗಮಂಗಲ ತಾಲೂಕು ಗರುಡನಹಳ್ಳಿ ಬಳಿ ಘಟನೆ ನಡೆದಿದೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾಯ ಸಂದ್ರ ಗ್ರಾಮದ ಶಿವರಾಜು(32) ಮೃತ. ಈತ ತನ್ನ ತಂದೆಯೊಂದಿಗೆ ಬೈಕ್‌ನಲ್ಲಿ ಮಾಯಸಂದ್ರದಿಂದ ಯಡಿಯೂರು ಮಾರ್ಗ ವಾಗಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.