Tuesday, 7th December 2021

ಭಾರತಕ್ಕೆ ಸೋಲು: ಆಘಾತದಲ್ಲಿ ಅಭಿಮಾನಿಗೆ ಹೃದಯಾಘಾತ, ಸಾವು

ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲಾಗಿದ್ದಕ್ಕೆ ಮನನೊಂದ ಹಿರಿಯ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿ ದ್ದಾರೆ.

ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ.

ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಮೃತರು. ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದಾಗ ಭಾರತ ಸೋತ ಹತ್ತು ನಿಮಿಷದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟೊತ್ತಿಗಾಗಲೆ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದರು.

ಕ್ರೀಡಾಭಿಮಾನಿ ಹಾಗೂ ಕಾಫಿ ಬೆಳೆಗಾರರಾಗಿದ್ದ ಉದಯ ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.