ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IIFA 2025: IIFA 2025 ಗ್ರೀನ್ ಕಾರ್ಪೆಟ್‌ನಲ್ಲಿ ಮಿಂಚಿದ ಕನ್ನಡದ ನಟಿ, ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

IIFA 2025: ಕನ್ನಡದ ನಟಿ ಹಾಗೂ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಬಾಲಿವುಡ್ ಅತೀ ದೊಡ್ಡ ಪ್ರಶಸ್ತಿ ಸಮಾರಂಭ ಇಂಟರ್‌ನ್ಯಾಷನಲ್ ಇಂಡಿಯನ್ ಫಿಲಂ ಅಕಾಡೆಮಿ ಅವಾರ್ಡ್ (IIFA 2025) ನಲ್ಲಿ ಅತಿಥಿಯಾಗಿ ಭಾಗಿಯಾಗಿದ್ದಾರೆ. ಖ್ಯಾತ ವಸ್ತ್ರ ವಿನ್ಯಾಸಕ ಫಾರೆವರ್ ನವೀನ್ ಕುಮಾರ್, ಸಿದ್ದಪಡಿಸಿದ ವಿನೂತನ ಉಡುಗೆಯಲ್ಲಿ ಸಂಹಿತಾ ವಿನ್ಯಾಸ IIFA 2025 ಗ್ರೀನ್ ಕಾರ್ಪೆಟ್‌ನಲ್ಲಿ ಮಿಂಚಿದ್ದಾರೆ.

ಗ್ರೀನ್ ಕಾರ್ಪೆಟ್‌ನಲ್ಲಿ ಮಿಂಚಿದ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

Profile Siddalinga Swamy Mar 14, 2025 4:54 PM

ಬೆಂಗಳೂರು: ʼವಿಷ್ಣು ಸರ್ಕಲ್ʼ, ʼಮೆಜೆಸ್ಟಿಕ್ 2ʼ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಹಾಗೂ ಮಾಡಲಿಂಗ್ ಕ್ಷೇತ್ರದಲ್ಲೂ ತನ್ನದೇ ಆದ ಚಾಪು ಮೂಡಿಸಿರುವ ನಟಿ ಸಂಹಿತಾ ವಿನ್ಯಾ (Samhita Vinya) ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಬಾಲಿವುಡ್ ಅತೀ ದೊಡ್ಡ ಪ್ರಶಸ್ತಿ ಸಮಾರಂಭ ಇಂಟರ್‌ನ್ಯಾಷನಲ್ ಇಂಡಿಯನ್ ಫಿಲಂ ಅಕಾಡೆಮಿ ಅವಾರ್ಡ್ (IIFA 2025) ನಲ್ಲಿ ಅತಿಥಿಯಾಗಿ ಭಾಗಿಯಾಗಿದ್ದಾರೆ. ಖ್ಯಾತ ವಸ್ತ್ರ ವಿನ್ಯಾಸಕ ಫಾರೆವರ್ ನವೀನ್ ಕುಮಾರ್ ಅವರು ಸಿದ್ದಪಡಿಸಿದ ವಿನೂತನ ಉಡುಗೆಯಲ್ಲಿ ಸಂಹಿತಾ ವಿನ್ಯಾ IIFA 2025 ಗ್ರೀನ್ ಕಾರ್ಪೆಟ್‌ನಲ್ಲಿ ಮಿಂಚಿದ್ದಾರೆ.

ʼIIFA 2025ʼ ಬಾಲಿವುಡ್‌ನ ದೊಡ್ಡ ಪ್ರಶಸ್ತಿ ಸಮಾರಂಭ. ಅದರಲ್ಲೂ ಬಾಲಿವುಡ್‌ನ ಇಂಟರ್‌ನ್ಯಾಷನಲ್ ಇಂಡಿಯನ್ ಫಿಲಂ ಅಕಾಡೆಮಿ ಅವಾರ್ಡ್ (IIFA) ಗೆ ಇದು 25ನೇ ವರ್ಷ. ಹಾಗಾಗಿ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ | Holi Beauty Tips: ಹೋಳಿಯಾಟದ ನಂತರ ತ್ವಚೆ & ಕೂದಲ ಆರೈಕೆ ಹೇಗೆ?

ಬಾಲಿವುಡ್ ಖ್ಯಾತ ಕಲಾವಿದರಾದ ಶಾರುಖ್ ಖಾನ್, ಮಾಧುರಿ ದೀಕ್ಷಿತ್ ಮುಂತಾದವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಇಂತಹ ವರ್ಣರಂಜಿತ ಸಮಾರಂಭದಲ್ಲಿ ಕನ್ನಡದ ನಟಿಯಾಗಿ ನಾನು ಪಾಲ್ಗೊಂಡಿದ್ದು ಬಹಳ ಸಂತೋಷವಾಗಿದೆ. ಇತ್ತೀಚೆಗೆ ಬಾಲಿವುಡ್‌ನಿಂದಲೂ ನನಗೆ ತುಂಬಾ ಆಫರ್ ಬರುತ್ತಿದೆ ಎನ್ನುತ್ತಾರೆ ಸಂಹಿತಾ ವಿನ್ಯಾ.