Thursday, 19th May 2022

ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆ

Omicrone V

ಮೈಸೂರು : ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ.

ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ವಿದೇಶದಿಂದ ಆಗಮಿಸಿದ್ದ 9 ವರ್ಷದ ಮಗುವಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.

ಸ್ವಿಡ್ಜರ್ಲ್ಯಾಂಡ್ ನಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದ್ದು, ಬಾಲಕಿಗೆ ಯಾವುದೇ ರೀತಿ ರೋಗ ಲಕ್ಷಣಗಳಿರಲ್ಲ. ಸದ್ಯ ಬಾಲಕಿ ಯನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.