Thursday, 16th September 2021

ವ್ಯಾಗನರ್ ಕಾರು ಬಸ್ಸಿಗೆ ಡಿಕ್ಕಿ: ಐವರು ಸಜೀವ ದಹನ

ರಾಮಘರ್: ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿ ಕೊಂಡ ಪರಿಣಾಮ ಐವರು ಸಜೀವ ದಹನಗೊಂಡಿದ್ದಾರೆ.

ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದದಲ್ಲಿ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಕೂಡ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸ ಲಾಗಿದೆ ಎಂದು ಪೊಲೀಸರು ತಿಳಿಸಿ ದ್ದಾರೆ.

ರಾಮಘರ್-ಗೋಲಾ ಮುಖ್ಯ ರಸ್ತೆಯಲ್ಲಿ ವ್ಯಾಗನರ್ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಐದು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ. ಮೃತರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಮತ್ತು ಟೀನೇಜ್ ಹುಡುಗ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರು ಪಾಟ್ನಾದವರಾಗಿದ್ದು, ಪೊಲೀಸರು ಅವರ ವಿಳಾಸ ಮತ್ತು ಇತರ ವಿವರಗಳನ್ನು ಪತ್ತೆ ಮಾಡುತ್ತಿದ್ದಾರೆ. 

Leave a Reply

Your email address will not be published. Required fields are marked *