Friday, 24th March 2023

ಕಾಫಿನಾಡಿನಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸ ಲಾಯಿತು.

ನಗರದ ಆಜಾದ್ ಪಾರ್ಕ್ ನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮುಂದಾಳತ್ವದಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ ಮಾಡಿಸಿದರು.

ಸ್ವತಃ ಮುಂದೆ ನಿಂತು ಪೌರ ಕಾರ್ಮಿಕ ಮಹಿಳೆ ನಾಗಮ್ಮ ಅವರಿಂದ ಧ್ವಜಾರೋಹಣ ಮಾಡಿಸಿ ಗಮನ ಸೆಳೆದಿದ್ದಾರೆ.

ಧ್ವಜಾರೋಹಣ ಕಾರ್ಯಕ್ರಮದಲ್ಲಿ 2000ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು, ಧ್ವಜಾರೋಹಣಕ್ಕೂ ಮೊದಲು ನಗರದ ಮುಖ್ಯ ಬೀದಿಗಳಲ್ಲಿ ಬೃಹತ್ ತಿರಂಗ ಯಾತ್ರೆ ನಡೆಸಿದರು.

error: Content is protected !!