Monday, 15th August 2022

ಚಿತ್ರೀಕರಣ ಮುಗಿಸಿದ ಫಾರ್‌ ರಿಜಿಸ್ಟ್ರೇಷನ್‌

ಪೃಥ್ವಿ ಅಂಬರ್ ಹಾಗೂ ಮಿಲನಾ ನಾಗರಾಜ್ ಅಭಿನಯದಲ್ಲಿ ಮೂಡಿಬರುತ್ತಿರುವ ಫಾರ್ ರಿಜಿಸ್ಟ್ರೇಷನ್ ಚಿತ್ರದ ಚಿತ್ರೀಕರಣ  ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಜುಲೈನಲ್ಲಿ ಆ ಎರಡು ಹಾಡುಗಳ ಚಿತ್ರೀಕರಣ ನಡೆಯಲಿದೆ.

ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಶೂಟಿಂಗ್ ನಡೆಸಲಾಗಿದೆ.

ಕೇವಲ ಮೂವತ್ತೆರಡು ದಿನಗಳಲ್ಲಿ ಮಾತಿನ ಭಾಗದ ಚಿತ್ರೀಕರಣವನ್ನು ಮುಗಿಸಲಾಗಿದೆ. ದಿಯಾ ಹಾಗೂ ಲವ್ ಮಾಕ್ಟೇಲ್ ಚಿತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನಾ ನಾಗರಾಜ್ ಜೋಡಿಯ ಈ ಚಿತ್ರದ ಬಿಡುಗಡೆಗೆ ಸಿನಿಪ್ರಿಯರು ಕಾಯುತ್ತಿದ್ದಾರೆ.

ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಲವ್ ಸ್ಟೋರಿಯ ಜತೆಗೆ ಒಂದಷ್ಟು ಕಾಮಿಡಿ ಅಂಶಗಳು ಚಿತ್ರದ ಕಥೆಯಲ್ಲಿ ಬೆರೆತಿವೆ. ನವೀನ್ ದ್ವಾರಕನಾಥ್ ಆಕ್ಷನ್ ಕಟ್ ಹೇಳುತ್ತಿದ್ದು, ನಿಶ್ಚಲ್ ಫಿಲಂಸ್ ಮೂಲಕ ಎನ್.ನವೀನ್ ರಾವ್ ಈ ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ.