Saturday, 23rd November 2024

ಪಾಕಿಸ್ತಾನ ರಾಯಭಾರ ಕಚೇರಿ ಬಳಿ ಕಾಲ್ತುಳಿತ ಸಂಭವಿಸಿ, 11 ಮಹಿಳೆಯರ ಸಾವು

ಕಾಬೂಲ್: ಅಫಘಾನಿಸ್ತಾನದ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿ, 11 ಮಹಿಳೆಯರು ಮೃತಪಟ್ಟಿದ್ದಾರೆ.

ದೇಶ ತೊರೆಯಲು ವೀಸಾಗಾಗಿ ಪಾಕಿಸ್ತಾನ ರಾಯಭಾರ ಕಚೇರಿ ಬಳಿ ಸಾವಿರಾರು ಜನ ಸೇರಿದ್ದರು. ಈ ವೇಳೆ ಕಾಲ್ತುಳಿತ ಸಂಭವಿ ಸಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಸರ್ಕಾರದ ವಕ್ತಾರ ಅಟೌಲಾ ಖೋಗಿಯಾನಿ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಹೆಚ್ಚಿನವರು ವೃದ್ಧರು. ಇವರು ಪಾಕಿಸ್ತಾನಕ್ಕೆ ತೆರಳಲು ವೀಸಾ ಪಡೆಯಲು ಬಂದಿದ್ದರು ಎಂದು ಹೇಳಿದ್ದಾರೆ.