Wednesday, 18th September 2024

ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಭಾರಿ ಮಳೆ: 125 ಮಂದಿ ನಾಪತ್ತೆ

ರಿಯೊ ಡಿ ಜನೈರೊ: ಬ್ರೆಜಿಲ್‌ನ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈವರೆಗೆ 136 ಜನ ಮೃತಪಟ್ಟಿದ್ದು, 125 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಆಡಳಿತ ಹೇಳಿದೆ.

ಬಿರುಗಾಳಿ ಮತ್ತು ಪ್ರವಾಹದ ಪರಿಣಾಮ ಸುಮಾರು 446 ನಗರಗಳಿಗೆ ಹಾನಿಯಾಗಿದೆ.

ರಾಜ್ಯದಲ್ಲಿ ಸುಮಾರು 1 ಕೋಟಿೂ ಹೆಚ್ಚು ಜನಸಂಖ್ಯೆಯಿದ್ದು, 20 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ತೊಂದರೆಗೀಡಾಗಿದ್ದಾರೆ. ಸದ್ಯ ಸುಮಾರು 5,37,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ನಾಗರಿಕ ರಕ್ಷಣಾ ಸಂಸ್ಥೆ ಹೇಳಿಕೆ ನೀಡಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ಮಳೆಯಿಂದಾಗಿ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಮಳೆ ಮುಂದುವರಿದರೆ ಅಪಾಯ ಸ್ಥಿತಿ ಎದುರಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Leave a Reply

Your email address will not be published. Required fields are marked *