ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 12 ಸೈನಿಕರು ಸೇರಿ 15 ಮಂದಿ ಬಲಿ
ವಾಯುವ್ಯ ಪಾಕಿಸ್ತಾನದಲ್ಲಿ ಗುರುವಾರ ರಾತ್ರಿ ಭದ್ರತಾ ಚೆಕ್‌ಪೋಸ್ಟ್‌ಗೆ ಸ್ಫೋಟಕಗಳಿಂದ ತುಂಬಿದ ವಾಹನವೊಂದು ಡಿಕ್ಕಿ ಹೊಡೆದಿದ್ದು, ಸೈನಿಕರು, ಪೊಲೀಸರು ಮತ್ತು ಸರ್ಕಾರಿ ಸಿಬ್ಬಂದಿ ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಸೇನೆ ಶುಕ್ರವಾರ ತಿಳಿಸಿದೆ. ದಾಳಿಗೆ ಪ್ರತೀಕಾರವಾಗಿ, 12 ಉಗ್ರಗಾಮಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಗ್ರಹ ಚಿತ್ರ -
ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ತಾನದಲ್ಲಿ (Pakistan) ಗುರುವಾರ ರಾತ್ರಿ ಭದ್ರತಾ ಚೆಕ್‌ಪೋಸ್ಟ್‌ಗೆ ಸ್ಫೋಟಕಗಳಿಂದ ತುಂಬಿದ ವಾಹನವೊಂದು ಡಿಕ್ಕಿ ಹೊಡೆದಿದ್ದು, ಸೈನಿಕರು, ಪೊಲೀಸರು ಮತ್ತು ಸರ್ಕಾರಿ ಸಿಬ್ಬಂದಿ ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ ಎಂದು ಪಾಕ್ ಸೇನೆ ಶುಕ್ರವಾರ ತಿಳಿಸಿದೆ. ದಾಳಿಗೆ ಪ್ರತೀಕಾರವಾಗಿ, 12 ಉಗ್ರಗಾಮಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಗೆ ಹೊಂದಿಕೊಂಡಿರುವ ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಟ್ಯಾಂಕ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
‘ಹನ್ನೆರಡು ಸೈನಿಕರು, ಇಬ್ಬರು ಪೊಲೀಸರು ಮತ್ತು ಅರಣ್ಯ ಇಲಾಖೆಯ ಮಾಜಿ ಸರ್ಕಾರಿ ಅಧಿಕಾರಿ ಸೇರಿದಂತೆ ಹದಿನೈದು ಧೈರ್ಯಶಾಲಿ ಮಣ್ಣಿನ ಪುತ್ರರು ಅಂತಿಮ ತ್ಯಾಗ ಮಾಡಿ ಶಹಾದತ್ (ಹುತಾತ್ಮ) ವನ್ನು ಸ್ವೀಕರಿಸಿದ್ದಾರೆ’ ಎಂದು ಪಾಕ್ ಸೇನೆ ಪೋಸ್ಟ್ ಹಂಚಿಕೊಂಡಿದೆ. "ದಾಳಿಕೋರರು ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿಗೊಳಿಸಿದರು ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ದಾಳಿಯ ಹೊಣೆ ಹೊತ್ತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್
ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ ಎಂದೂ ಕರೆಯಲ್ಪಡುವ ಸ್ಥಳೀಯ ತಾಲಿಬಾನ್ ಉಗ್ರಗಾಮಿಗಳು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ನಾಲ್ವರು ಆತ್ಮಾಹುತಿ ಬಾಂಬರ್‌ಗಳು ಇದರಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇತ್ತೀಚಿನ ತಿಂಗಳುಗಳಲ್ಲಿ ವಾಯುವ್ಯ ಪಾಕಿಸ್ತಾನದಲ್ಲಿ ಉಗ್ರಗಾಮಿತ್ವ ತೀವ್ರವಾಗಿ ಹೆಚ್ಚಾಗಿದ್ದು, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವಿನ ಸಂಬಂಧ ಸಂಪೂರ್ಣವಾಗಿ ಹಳಸಿದೆ.
ಕಳೆದ ತಿಂಗಳು ಅಫ್ಘಾನಿಸ್ತಾನದ ಗಡಿ ಭಾಗದಲ್ಲಿನ ಉಗ್ರರ ಅಡಗುತಾಣಗಳು ಮತ್ತು ಬೇಸ್‌ಗಳ ಮೇಲೆ ಪಾಕ್ ಸೇನೆ ಭೂ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯಚರಣೆಯಲ್ಲಿ 29 ಹೋರಾಟಗಾರರನ್ನು ಕೊಲ್ಲಲಾಗಿತ್ತು. ಪಾಕಿಸ್ತಾನದ ಈ ದಾಳಿಗಳು ಇತ್ತೀಚಿಗೆ ಪಾಕಿಸ್ತಾನದ ದಕ್ಷಿಣ ಬಂದರು ನಗರವಾದ ಕರಾಚಿಯಲ್ಲಿರುವ ಅರೆಸೈನಿಕ ರೇಂಜರ್ಸ್‌ನ ಪ್ರಾದೇಶಿಕ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ಬಂದೂಕುಗಳು ಮತ್ತು ಸ್ಫೋಟಕಗಳಿಂದ ಶಸ್ತ್ರಸಜ್ಜಿತವಾದ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ 3 ಸೈನಿಕರು ಸಾವನ್ನಪ್ಪಿದ್ದರು.
ಭಯೋತ್ಪಾದನೆ, ಕಾಶ್ಮೀರ, ಸಿಂಧೂ ನದಿ ನೀರು ಒಪ್ಪಂದ ವಿಚಾರ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆ
ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ಸೇನಾ ಕಾರ್ಯಚರಣೆಯನ್ನು ಹೆಚ್ಚಳ ಮಾಡಿರುವುದು ಇದು ಈಗಾಗಲೇ ಬಿಗಾಡಾಯಿಸಿರುವ ಒಂದು ಕಾಲದ ಮಿತ್ರರಾಷ್ಟ್ರ ದೇಶಗಳ ಸಂಬಂಧವನ್ನು ಮತ್ತಷ್ಟು ಹದಗೆಡಿಸುತ್ತಿವೆ.