Wednesday, 11th December 2024

ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಬೆಂಕಿ, 18 ವಿದ್ಯಾರ್ಥಿಗಳ ಸಾವು

ಬೀಜಿಂಗ್: ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, 18 ಮಂದಿ ವಿದ್ಯಾರ್ಥಿಗಳು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಲ್ಲಿ ಹೆಚ್ಚಿನವರು 7 ರಿಂದ 16 ವರ್ಷದೊಳಗಿನವರಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೆಂಕಿ ಕಾಣಿಸಿಕೊಂಡಾಗ ಶಾಲಾ ಆವರಣದಲ್ಲಿ 34 ವಿದ್ಯಾರ್ಥಿಗಳಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.