Monday, 16th September 2024

ಬಸ್-ಆಯಿಲ್ ಟ್ಯಾಂಕರ್ ಡಿಕ್ಕಿ: 20 ಜನರು ಸಜೀವ ದಹನ

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಂಗಳವಾರ ಪ್ರಯಾಣಿಕರ ಬಸ್ ಮತ್ತು ಆಯಿಲ್ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಕನಿಷ್ಠ 20 ಜನರು ಸಜೀವ ದಹನಗೊಂಡಿದ್ದಾರೆ.

ಲಾಹೋರ್‌ನಿಂದ ಸುಮಾರು 350 ಕಿಮೀ ದೂರದಲ್ಲಿ ಮುಲ್ತಾನ್‌ನ ರಸ್ತೆ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಅಪಘಾತದ ನಂತರ, ಬಸ್ ಮತ್ತು ಟ್ಯಾಂಕರ್‌ ಎರಡಕ್ಕೂ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ” ಎಂದು ವರದಿಯಾಗಿದೆ.

ಅಪಘಾತದಲ್ಲಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆರು ಪ್ರಯಾಣಿಕರನ್ನು ಮುಲ್ತಾನ್‌ನ ನಿಶ್ತಾರ್ ಆಸ್ಪತ್ರೆಗೆ ಸ್ಥಳಾಂತರಿಸ ಲಾಗಿದೆ.

ಪಂಜಾಬ್ ಮುಖ್ಯಮಂತ್ರಿ ಪರ್ವೇಜ್ ಇಲಾಹಿ ಅವರು ಅಪಘಾತದಲ್ಲಿ ಜೀವ ಗಳನ್ನು ಕಳೆದುಕೊಂಡಿರುವ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳು ಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸಂಬಂಧಿಸಿದ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಶನಿವಾರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಲೋಡ್ ಟ್ರಕ್ ಒಂದು ಪ್ರಯಾಣಿಕರ ಬಸ್‌ಗೆ ಡಿಕ್ಕಿ ಹೊಡೆದು ಕನಿಷ್ಠ 13 ಜನರು ಮೃತಪಟ್ಟಿದ್ದರು.