ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನ್ಯುಮೋನಿಯಾದಿಂದ 200ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿವೆ. ತೀವ್ರ ಚಳಿಯ ವಾತಾವರಣ ದಿಂದಾಗಿ ಈ ಸಾವು ಸಂಭವಿಸಿವೆ ಎಂದು ಸರ್ಕಾರ ಶುಕ್ರವಾರ ದೃಢಪಡಿಸಿದೆ.
ಮೃತಪಟ್ಟ ಹೆಚ್ಚಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರು ಹಾಗೂ ನ್ಯುಮೋನಿಯಾ ಲಸಿಕೆ ಪಡೆದಿರಲಿಲ್ಲ ಎಂದು ಸ್ಥಳಿಯ ಸರ್ಕಾರ ಮಾಹಿತಿ ನೀಡಿದೆ.
ಹವಾಮಾನ ವೈಪರೀತ್ಯದ ಕಾರಣ ಜನವರಿ 31ರವರೆಗೆ ಬೆಳಿಗ್ಗೆ ತರಗತಿ ನಡೆಸದಂತೆ ಸರ್ಕಾರ ಈಗಾಗಲೇ ಶಾಲೆಗಳಿಗೆ ಸೂಚಿಸಿದೆ. ಜನವರಿ 1ರಿಂದ ಪಂಜಾಬ್ ಪ್ರಾಂತ್ಯದಲ್ಲಿ ಒಟ್ಟು 10,520 ನ್ಯುಮೋನಿಯಾ ಪ್ರಕರಣಗಳು ವರದಿಯಾಗಿವೆ. 220 ಮಕ್ಕಳು ಮೃತಪಟ್ಟಿದ್ದು, ಅವರೆಲ್ಲರೂ 5 ವರ್ಷದೊಳಗಿ ನವರು ಎಂದು ಸರ್ಕಾರ ದೃಢಪಟಿಸಿದೆ. ಪಂಜಾಬ್‌ನ ಪ್ರಾಂತೀಯ ರಾಜಧಾನಿ ಲಾಹೋರ್‌ನಲ್ಲಿ 47 ಮಕ್ಕಳು ಮೃತಪಟ್ಟಿವೆ.