ಪಿಒಕೆಯಲ್ಲಿ ಪಾಕಿಸ್ತಾನ ಸೈನಿಕರು ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಪತನ; 21 ಮಂದಿ ಸಾವಿನ ಶಂಕೆ
Helicopter Crashes: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸೇನೆಗೆ ಸೇರಿದ ಯುದ್ಧ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಪತನಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಈ ದುರಂತದಲ್ಲಿ ಅದರಲ್ಲಿದ್ದ ಎಲ್ಲ 21 ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾಂದರ್ಭಿಕ ಚಿತ್ರ -
ಇಸ್ಲಾಮಾಬಾದ್, ಜೂ. 10: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಪಾಕಿಸ್ತಾನ ಸೇನೆಗೆ ಸೇರಿದ ಯುದ್ಧ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಪತನಗೊಂಡಿರುವ ಘಟನೆ ಬುಧವಾರ (ಜೂನ್ 10) ಸಂಭವಿಸಿದೆ (Helicopter Crashes). ಈ ದುರಂತದಲ್ಲಿ ಅದರಲ್ಲಿದ್ದ ಎಲ್ಲ 21 ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಷ್ಟು ಮಂದಿ ಮೃತಪಟ್ಟಿದ್ದಾರೆ ಎನ್ನುವ ಅಧಿಕೃತ ಮಾಹಿತಿ ಇನ್ನೂ ಹೊರ ಬಂದಿಲ್ಲ. ʼʼಪಿಒಕೆಯ ಆಯಕಟ್ಟಿನ ಪ್ರದೇಶವೊಂದರಲ್ಲಿ ಪಾಕಿಸ್ತಾನ ಸೇನೆಗೆ ಸೇರಿದ ಈ ಹೆಲಿಕಾಪ್ಟರ್ ಪತನಗೊಂಡು ದುರಂತ ಸಂಭವಿಸಿದೆʼʼ ಎಂದು ಅದಿಕಾರಿಗಳು ವಿವರಿಸಿದ್ದಾರೆ. ಹೆಲಿಕಾಪ್ಟರ್ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮುಜಫರಾಬಾದ್ ಬಳಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿತು. ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಭೀಕರ ವೈಮಾನಿಕ ದುರಂತ ಇದು ಎನಿಸಿಕೊಂಡಿದೆ.
ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಪ್ರಕಾರ, ಎಂಐ-17 (Mi-17) ಹೆಲಿಕಾಪ್ಟರ್ ಟೇಕ್‌ಆಫ್ ಸಮಯದಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿದ್ದವರು ಯಾರೂ ಬದುಕುಳಿದಿಲ್ಲ.
ಮುಜಫರಾಬಾದ್ ಬಳಿ ಪತನಕ್ಕೀಡಾದ ಹೆಲಿಕಾಪ್ಟರ್:
‼️ A Mi-17 helicopter of Pakistan Army Aviation crashed near Muzaffarabad.
— First Post (@TrishulTactics) June 10, 2026
All 21 personnel on board died including Commander of 21 squadron , Colonel Amjad. pic.twitter.com/lvL0EC1ghO
"ಹೆಲಿಕಾಪ್ಟರ್‌ಲ್ಲಿದ್ದ ಎಲ್ಲ ಸಿಬ್ಬಂದಿ ಹುತಾತ್ಮರಾದರು. ಯಾರೂ ಬದುಕುಳಿದಿಲ್ಲ" ಎಂದು ಐಎಸ್‌ಪಿಆರ್ ತನ್ನ ಹೇಳಿಕೆಯಲ್ಲಿ ದೃಢಪಡಿಸಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ. ಪಾಕ್ ಆಕ್ರಮಿತ ಕಾಶ್ಮೀರದ ಮುಜಫರಾಬಾದ್ ಬಳಿ ಈ ಅಪಘಾತ ಸಂಭವಿಸಿದ್ದು, ತಕ್ಷಣ ರಕ್ಷಣ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹೆಲಿಕಾಪ್ಟರ್‌ನಲ್ಲಿದ್ದ ಬಹುತೇಕರ ಸೇಹ ಸುಟ್ಟುಕರಕಲಾಗಿದ್ದು, ಗುರುತು ಪತ್ತೆಯೇ ಸವಾಲು ಎಂಬಂತಾಗಿದೆ.
ಪಿಒಕೆಯಲ್ಲಿ ಪಾಕ್ ಸೈನಿಕರ ಅಟ್ಟಹಾಸಕ್ಕೆ 19 ಮಕ್ಕಳು, 7 ಗರ್ಭಿಣಿಯರು ಬಲಿ
ಅಪಘಾತಕ್ಕೆ ಕಾರಣವೇನು?
ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣ ಕಂಡುಹಿಡಿಯಲು ಮಿಲಿಟರಿ ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ. "ಅಪಘಾತದ ನಿಖರ ತಾಂತ್ರಿಕ ಕಾರಣವನ್ನು ಕಂಡುಹಿಡಿಯಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ" ಎಂದು ಐಎಸ್‌ಪಿಆರ್ ತಿಳಿಸಿದೆ. ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಎಷ್ಟು ಸಿಬ್ಬಂದಿ ಇದ್ದರು ಎಂಬುದನ್ನು ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ. ಅಂದಾಜಿನ ಪ್ರಕಾರ ಸುಮಾರು 21 ಸಿಬ್ಬಂದಿ ಇದ್ದರು.
ಪಾಕಿಸ್ತಾನ ರಕ್ಷಣಾ ಪಡೆಗಳ ಮುಖ್ಯಸ್ಥ ಮತ್ತು ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ತಾಂತ್ರಿಕ ದೋಷ ಅರಿವಿಗೆ ಬರುತ್ತಿದ್ದಂತೆ ಕ್ಯಾಪ್ಟನ್ ಹೆಲಿಕಾಪ್ಟರ್ ಸುರಕ್ಷಿತವಾಗಿ ಇಳಿಸಲು ಮುಂದಾಗಿದ್ದಾರೆ. ಆದರೆ ಸಾಧ್ಯವಾಗಲಿಲ್ಲ ಎಂದು ಮೂಲಗಳು ವರದಿ ಮಾಡಿವೆ.
ಪಿಒಕೆಯಲ್ಲಿ ರಕ್ತಪಾತ ಹರಿಸಿದ ಪಾಕ್ ಸೇನೆ; 30 ಪ್ರತಿಭಟನಾಕಾರರು ಸಾವು, 200 ಜನರಿಗೆ ಗಾಯ
ಅಪಘಾತಗಳ ಸರಣಿ
ಇತ್ತೀಚೆಗೆ ಪಾಕಿಸ್ತಾನ ಮಿಲಿಟರಿ ಮತ್ತು ಸರ್ಕಾರಿ ವಿಮಾನಗಳು ಪತನಗೊಂಡ ಅನೇಕ ಘಟನೆ ನಡೆದಿವೆ. 2025ರ ಸೆಪ್ಟೆಂಬರ್‌ನಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನದ ಡೈಮರ್ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ 5 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು. ಈ ಅಪಘಾತ ಕೂಡ ತಾಂತ್ರಿಕ ದೋಷದಿಂದಲೇ ಸಂಭವಿಸಿತ್ತು. ಅದಕ್ಕೂ ಮೊದಲು ಖೈಬರ್ ಪಖ್ತುನ್ಖ್ವಾ ಸರ್ಕಾರ ನಿರ್ವಹಿಸುತ್ತಿದ್ದ ರಕ್ಷಣಾ ಹೆಲಿಕಾಪ್ಟರ್ ಕೆಟ್ಟ ಹವಾಮಾನದ ಕಾರಣ ಮೊಹ್ಮಂಡ್ ಜಿಲ್ಲೆಯಲ್ಲಿ ಪತನಗೊಂಡು ಇಬ್ಬರು ಪೈಲಟ್‌ಗಳು ಮತ್ತು ಮೂವರು ಸಿಬ್ಬಂದಿ ಮೃತಪಟ್ಟಿದ್ದರು.
ವಿದೇಶ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.