Tahawwur Rana: ಮುಂಬೈ ಭಯೋತ್ಪಾದಕ ದಾಳಿ ಆರೋಪಿ ತಹವ್ವೂರ್ ರಾಣಾ ಗಡಿಪಾರು ತಡೆಯಾಜ್ಞೆ ಅರ್ಜಿ ತಿರಸ್ಕರಿಸಿದ ಅಮೆರಿಕ ಸುಪ್ರೀಂ ಕೋರ್ಟ್
ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ತುರ್ತು ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್‌ಗೆ ತಿರಸ್ಕರಿಸಿದೆ.ಅಮೆರಿಕದ ಸುಪ್ರೀಂ ಕೋರ್ಟ್‌ನ ಅಸೋಸಿಯೇಟ್ ನ್ಯಾಯಮೂರ್ತಿ ಮತ್ತು ಒಂಬತ್ತನೇ ಸರ್ಕ್ಯೂಟ್‌ನ ಸರ್ಕ್ಯೂಟ್ ನ್ಯಾಯಮೂರ್ತಿಗಳು ರಾಣಾನ ಅರ್ಜಿಯನ್ನು ವಜಾಗೊಳಿಸಿದ್ದಾರೆ

ತಹವ್ವುರ್ ರಾಣಾ

ವಾಷಿಂಗ್ಟನ್: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ( Tahawwur Rana) ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ತುರ್ತು ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್‌ಗೆ ( America Supreme Court) ತಿರಸ್ಕರಿಸಿದೆ. ತಾನು ಪಾಕಿಸ್ತಾನಿ ಮೂಲದ ಮುಸ್ಲಿಂ ಆಗಿರುವುದರಿಂದ ಭಾರತದಲ್ಲಿ ತನಗೆ ಹಿಂಸೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ರಾಣಾ ಅರ್ಜಿಯಲ್ಲಿ ಹೇಳಿದ್ದ. 63 ವರ್ಷದ ತಹವ್ವುರ್ ರಾಣಾ ಪ್ರಸ್ತುತ ಲಾಸ್ ಏಂಜಲೀಸ್‌ನ ಜೈಲಿನಲ್ಲಿದ್ದಾನೆ . ಅಮೆರಿಕದ ಸುಪ್ರೀಂ ಕೋರ್ಟ್‌ನ ಅಸೋಸಿಯೇಟ್ ನ್ಯಾಯಮೂರ್ತಿ ಮತ್ತು ಒಂಬತ್ತನೇ ಸರ್ಕ್ಯೂಟ್‌ನ ಸರ್ಕ್ಯೂಟ್ ನ್ಯಾಯಮೂರ್ತಿಗಳು ರಾಣಾನ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ತಹವ್ವುರ್ ರಾಣಾನನ್ನು ಹಸ್ತಾಂತರ ಮಾಡಬೇಕು ಎಂದು ಭಾರತ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿತ್ತು. 166 ಜನರ ಸಾವಿಗೆ ಕಾರಣವಾದ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಡೇವಿಡ್ ಹೆಡ್ಲಿಯೊಂದಿಗೆ ಈತ ಸಂಬಂಧ ಹೊಂದಿದ್ದಾನೆ ಎಂದು ತಿಳಿದುಬಂದಿದೆ. ಭಾರತದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ, ವಿಶೇಷವಾಗಿ ಮುಸ್ಲಿಮರ ಮೇಲೆ ವ್ಯವಸ್ಥಿತ ತಾರತಮ್ಯ ಕಳವಳವನ್ನು ಉಂಟು ಮಾಡಿದೆ. 2033 ರಲ್ಲಿ ಮಾನವ ಹಕ್ಕುಗಳ ವರದಿ ಹೇಳಿದೆ ಎಂದು ರಾಣಾ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.
ಅಷ್ಟೇ ಅಲ್ಲದೆ ಜುಲೈ 2024 ರ ವೈದ್ಯಕೀಯ ದಾಖಲೆಗಳನ್ನು ಉಲ್ಲೇಖಿಸಿದ ರಾಣಾ ಪರ ವಕೀಲರು, ರಾಣಾಗೆ ಕೆಲವು ಕಾಯಿಲೆಗಳಿವೆ. ಎರಡು ಬಾರಿ ಹೃದಯಾಘಾತವಾಗಿದೆ. ಪಾರ್ಕಿನ್ಸನ್ ಕಾಯಿಲೆ, ಮೂತ್ರಕೋಶದ ಕ್ಯಾನ್ಸರ್ ಹಾಗೂ ಅಸ್ತಮಾ ಕೂಡ ಇದೆ ಎಂಬುದನ್ನು ಉಲ್ಲೇಖ ಮಾಡಿದ್ದರು. ಇದೀಗ ರಾಣಾ ಪ್ರಯಾಣ ಮಾಡುವಷ್ಟು ಶಕ್ತಿಯನ್ನು ಹೊಂದಿಲ್ಲ ಎಂದು ಅವರು ಹೇಳಿದ್ದರು. ಆದರೆ ಇದಕ್ಕೆ ಮಣೆ ಹಾಕದ ಅಮೆರಿಕದ ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕಾರ ಮಾಡಿದೆ.
ಈ ಸುದ್ದಿಯನ್ನೂ ಓದಿ: Tahawwur Rana : ತಹವ್ವುರ್ ರಾಣಾ ಭಾರತಕ್ಕೆ ಹಸ್ತಾಂತರ ಪ್ರಕ್ರಿಯೆ ; ತಡೆ ನೀಡಲು ಅಮೆರಿಕದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಮುಂಬೈ ದಾಳಿ ರೂವಾರಿ
ಕಳೆದ ಸೆಪ್ಟೆಂಬರ್‌ನಲ್ಲಿ ಗಡಿಪಾರು ಮಾಡದಂತೆ ಕೋರಿ ತಹವ್ವುರ್ ಹುಸೇನ್ ರಾಣಾ ಸಲ್ಲಿಕೆ ಮಾಡಿದ್ದ ಮನವಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಹಸ್ತಾಂತರ ಮಾಡಲು ಅವಕಾಶವಿದೆ ಎಂದು ಹೇಳಿತ್ತು. ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಾಣಾನನ್ನು ಗಡೀಪಾರು ಮಾಡಲು ತಮ್ಮ ಆಡಳಿತ ಅನುಮೋದನೆ ನೀಡಿದೆ ಎಂದು ಘೋಷಿಸಿದ್ದರು.