ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿಅವಘಡ: 27 ಮಂದಿ ಸಾವು, 60ಕ್ಕೂ ಅಧಿಕ ಜನರಿಗೆ ಗಾಯ

Bangkok fire accident: ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್‌ನ ಉತ್ತರ ಭಾಗದಲ್ಲಿರುವ ನಾ ಲಾಡ್‌ಪ್ರಾವೋ (Na Ladprao) ಪಬ್‌ನಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕೆನ್ನಾಲಿಗೆ ಕ್ಷಣಾರ್ಧದಲ್ಲ ಪಬ್‌ ಸಂಪೂರ್ಣ ಆವರಿಸಿದೆ.

ಸಂಗ್ರಹ ಚಿತ್ರ

ಬ್ಯಾಂಕಾಕ್‌: ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್‌ನ ಉತ್ತರ (Bangkok fire accident) ಭಾಗದಲ್ಲಿರುವ ನಾ ಲಾಡ್‌ಪ್ರಾವೋ (Na Ladprao) ಪಬ್‌ನಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕೆನ್ನಾಲಿಗೆ ಕ್ಷಣಾರ್ಧದಲ್ಲ ಪಬ್‌ ಸಂಪೂರ್ಣ ಆವರಿಸಿದೆ. ಬಳಿಕ ಪಬ್ ತುಂಬೆಲ್ಲಾ ಹೊಗೆ ಮತ್ತು ಬೆಂಕಿ ಜ್ವಾಲೆಗಳಿಂದ ಆವರಿಸಿದೆ.

ಬ್ಯಾಂಕಾಕ್‌ನ ಉತ್ತರ ಭಾಗದಲ್ಲಿರುವ ಚತುಚಕ್‌ ಎಂಬ ಪ್ರದೇಶದಲ್ಲಿನ ಮನರಂಜನಾ ತಾಣವಾಗಿರುವ ರೋಂಗ್ ಬಿಯರ್ ನಾ ಲಾಟ್ ಫ್ರಾವೊ ಪಬ್‌ನಲ್ಲಿಈ ದುರಂತ ಸಂಭವಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಪಬ್‌ನ ಮುಂಭಾಗದಿಂದ ಭಾರೀ ಬೆಂಕಿ ಮತ್ತು ದಟ್ಟ ಕಪ್ಪು ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಒಳಗಿದ್ದವರು ಜೀವ ಉಳಿಸಿಕೊಳ್ಳಲು ಆತಂಕದಿಂದ ಹೊರಗೆ ಓಡುತ್ತಿರುವುದು ಕೂಡ ಕಂಡು ಬಂದಿದೆ.

ವಿಡಿಯೋ ನೋಡಿ



ಘಟನೆ ತಿಳಿದು ತಕ್ಷಣವೇ ಸ್ಥಳಕ್ಕೆ ಸ್ಥಳೀಯ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಸುಮಾರು ಅರ್ಧ ಗಂಟೆಗಳ ಬಳಿಕ ಬೆಂಕಿಯನ್ನು ನಿಯಂತ್ರಣ ಮಾಡಿದ್ದಾರೆ. ‌ ಥೈಲ್ಯಾಂಡ್ ಪ್ರಧಾನಿ ಅನುತಿನ್ ಚರ್ನ್‌ವಿರಕುಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿ " ಅಗ್ನಿ ದುರಂತದಲ್ಲಿ 27 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದಾಗ್ಯೂ, ಈ ದುರಂತಕ್ಕೆ ನಿಖರವಾದ ಕಾರಣದ ಕುರಿತು ತನಿಖೆ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ, ಆದರೆ, ಪಬ್‌ನಲ್ಲಿ ಪ್ರದರ್ಶನ ನೀಡುತ್ತಿದ್ದ ಸಂಗೀತಗಾರನೊಬ್ಬ ವೇದಿಕೆಯ ಬಳಿಯಿದ್ದ ಸರ್ಕ್ಯೂಟ್ ಬ್ರೇಕರ್‌ನಿಂದ ಹೊಗೆ ಬರುತ್ತಿರುವುದನ್ನು ನೋಡಿದೆ. ವಿದ್ಯುತ್ ಕಡಿತಗೊಳ್ಳುವ ಮೊದಲು ಹಾಗೂ ನಂತರ ಸ್ಫೋಟದ ಶಬ್ದ ಕೇಳಿಸಿತು ಮತ್ತು ದಟ್ಟವಾದ ಹೊಗೆ ಬೇಗನೆ ಸ್ಥಳವನ್ನು ತುಂಬಿತು ಎಂದು ಹೇಳಿದ್ದಾರೆ" ಎಂದು ತಿಳಿಸಿದ್ದಾರೆ.

ರೈಲಿನ ಎಸಿ ಕೋಚನ್ನೇ ಪರ್ಸನಲ್ ಬಾರ್ ಮಾಡಿಕೊಂಡ ಯುವಕರು: ಕಿಡಿಗೇಡಿಗಳ ವಿಡಿಯೋ ವೈರಲ್‌

ಈ ಹಿಂದೆಯೂ ಇದೇ ರೀತಿಯ ಹಲವಾರು ಘಟನೆಗಳು ಸಂಭವಿಸಿವೆ. 2022 ರಲ್ಲಿ, ಪೂರ್ವ ಥೈಲ್ಯಾಂಡ್‌ನ ಸಂಗೀತ ಪಬ್‌ನಲ್ಲಿ ಸಂಭವಿಸಿದ ಬೆಂಕಿಯಲ್ಲಿ 14 ಜನರು ಸಾವನ್ನಪ್ಪಿದರು. 2009 ರಲ್ಲಿ ಬ್ಯಾಂಕಾಕ್‌ನ ಸಂತಿಕಾ ನೈಟ್‌ಕ್ಲಬ್‌ನಲ್ಲಿ ಹೊಸ ವರ್ಷದ ಮುನ್ನಾದಿನದ ಆಚರಣೆಯ ಸಂದರ್ಭದಲ್ಲಿ 66 ಜನರು ಸಾವನ್ನಪ್ಪಿದ್ದರು.

Vishakha Bhat Heggar

View all posts by this author