ಲಾಗೋಸ್: ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರ ಅಪಹರಿಸಿದ್ದಾರೆ.
ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.
10 ಮತ್ತು 13 ವರ್ಷದ ಮಕ್ಕಳಿಬ್ಬರನ್ನೂ ಅಪಹರಿಸಲಾಗಿದೆ. ಶಾಲೆಯ ಹತ್ತಿರ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಅವರ ಪೋಷಕರ ಬಳಿ ತಲುಪಿಸುವುದು ನಮ್ಮ ಮೂಲ ಉದ್ದೇಶವಾಗಿದೆ.
ಹಣಕ್ಕಾಗಿ ಮುಗ್ಧ ಶಾಲಾ ಮಕ್ಕಳನ್ನು ಅಪಹರಿಸಿ, ಬೆದರಿಕೆಯೊಡ್ಡುವ ಬಂಡುಕೋರರಿಗೆ ನಾವು ಹೆದರುವುದಿಲ್ಲ ಎಂದು ನೈಜೀರಿಯಾದ ಅಧ್ಯಕ್ಷ ಮೊಹಮ್ಮದ್ ಬುಹಾರಿ ತಿಳಿಸಿದರು.