ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಹಿಂದೂ ದೇಗುಲ ಮೇಲಿನ ದಾಳಿ ಪ್ರಕರಣ: 450 ಮಂದಿ ಬಂಧನ

ಹಿಂದೂ ದೇಗುಲ ಮೇಲಿನ ದಾಳಿ ಪ್ರಕರಣ: 450 ಮಂದಿ ಬಂಧನ

image-b27af3f3-55e5-445f-bbfe-afed1dae8245.jpg
ಢಾಕಾ: ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರು ಸುಮಾರು 450 ಮಂದಿಯನ್ನು ಮಂಗಳವಾರ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಕೋಮು ಘರ್ಷಣೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಉದ್ರಿಕ್ತ ಗುಂಪನ್ನು ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಡುತ್ತಿದ್ದು, ಹಿಂದೂಗಳು ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ ನೋಖಾಲಿ ಜಿಲ್ಲೆ ಯಲ್ಲಿ ನೂರಾರು ಮುಸ್ಲಿಮರು ಪ್ರತಿಭಟನೆ ನಡೆಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. ಉದ್ರಿಕ್ತ ಮುಸ್ಲಿಮರ ಗುಂಪು ಬಾಂಗ್ಲಾದೇಶದ ಹಲವೆಡೆ ಹಿಂದೂ ದೇವಾಲಯ, ನವರಾತ್ರಿ ಪೆಂಡಾಲ್ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿತ್ತು. ದುರ್ಗಾ ಪೂಜೆ ವೇಳೆ ಸಂಭವಿಸಿದ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು 71 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ 450 ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಕೋಮು ದಳ್ಳುರಿ ಭುಗಿಲೆದ್ದಿದ್ದು, ಹಲವಾರು ಹಿಂದೂ ಮನೆಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದೆ ಎಂದು ವರದಿ ತಿಳಿಸಿದೆ.