ಈ ವೇಳೆ ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇನ್ನೂ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಂಧ್‌ನ ಖೈರ್‌ಪುರ್ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಛಾವಣಿ ಕುಸಿತದಿಂದ ಒಂದೇ ಕುಟುಂಬದ ವ್ಯಕ್ತಿ ಹಾಗೂ ಅವರ ಇಬ್ಬರು ಅಪ್ರಾಪ್ತ ಪುತ್ರರು ಮೃತಪಟ್ಟಿದ್ದರೆ, ಇಬ್ಬರು ಪುತ್ರಿಯರು ತೀವ್ರವಾಗಿ ಗಾಯಗೊಂಡಿದ್ದಾರೆ.