Sunday, 19th May 2024

ಶೀತ ಲಾವಾ ಹರಿವು: ಮೃತರ ಸಂಖ್ಯೆ 50ಕ್ಕೆ ಏರಿಕೆ

ನಾಹ್ ದಾತಾರ್: ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಶೀತ ಲಾವಾ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ. 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ಸಂಜೆ ಸುಮಾತ್ರಾ ದ್ವೀಪದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಬಳಿಕ ಸಂಭವಿಸಿದ ಪ್ರವಾಹದಿಂದ ರಸ್ತೆಗಳು, ಮನೆಗಳು ಜಲಾವೃತ ಗೊಂಡಿವೆ.

ಭಾನುವಾರ 37 ಮಂದಿ ಸಾವಿಗೀಡಾಗಿದ್ದರು. ಅವಶೇಷಗಳ ಅಡಿಯಿಂದ 50 ಶವಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದೆ ಎಂದು ಪಶ್ಚಿಮ ಸುಮಾತ್ರಾ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿ ಇಲ್ಹಾಮ್ ವಹಾಬ್ ತಿಳಿಸಿದ್ದಾರೆ.

ಭಾರಿ ಪ್ರವಾಹ ಹಿನ್ನೆಲೆ 3 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪಶ್ಚಿಮ ಸುಮಾತ್ರಾ ಗವರ್ನರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!