ಕಾಬೂಲ್ : ಕಾಬೂಲ್ ನ ಹಮೀದ್ ಕರ್ಜಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾನುವಾರ ಗಾಳಿಯಲ್ಲಿ ಗುಂಡಿನ ದಾಳಿಯ ಬಳಿಕ ಉಂಟಾದ ಕಾಲ್ತುಳಿತದಲ್ಲಿ ಏಳು ಆಫ್ಘನ್ ನಾಗರಿಕರು ಮೃತಪಟ್ಟಿದ್ದಾರೆ.
ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿರುವವರನ್ನು ಹೆದರಿಸಲು ತಾಲಿಬಾನ್ ಹೋರಾಟ ಗಾರರು ಗಾಳಿಯಲ್ಲಿ ಗುಂಡು ಹಾರಿಸುವುದನ್ನು ಮುಂದು ವರಿಸಿರುವುದರಿಂದ ಜನಸಂದಣಿಯಲ್ಲಿ ಹಲವಾರು ಕಾಲ್ತುಳಿತದಿಂದಾಗಿ 7 ಮಂದಿ ಮೃತಪಟ್ಟಿದ್ದರೆ, ಮತ್ತೆ ಕೆಲವರಿಗೆ ಸಣ್ಣಪುಟ್ಟ ಗಾಯ ಗಳಾಗಿವೆ ಎಂದು ಬ್ರಿಟಿಷ್ ರಕ್ಷಣಾ ಸಚಿವಾಲಯ ಹೇಳಿದೆ.
ಅಫ್ಘಾನಿನ ಪರಿಸ್ಥಿತಿ ಅತ್ಯಂತ ಸವಾಲಿನಿಂದ ಕೂಡಿದೆ. ಆದರೆ ಪರಿಸ್ಥಿತಿಯನ್ನು ಸಾಧ್ಯವಾದಷ್ಟು ಸುರಕ್ಷಿತವಾಗಿ ನಿರ್ವಹಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ ಎಂದು ರಕ್ಷಣಾ ಸಚಿವಾಲಯವು ತಿಳಿಸಿದೆ.
ತಾಲಿಬಾನ್ ಸ್ವಾಧೀನದ ನಂತರ ಯುದ್ಧದಿಂದ ಹಾನಿಗೊಳಗಾದ ದೇಶದಲ್ಲಿ ಸ್ಥಳಾಂತರ ಅವ್ಯವಸ್ಥೆ ಮುಂದುವರಿದಿದೆ.