ಢಾಕಾ: ಕರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿರುವ ಬಾಂಗ್ಲಾದೇಶದಲ್ಲಿ ಏಪ್ರಿಲ್ 5ರಿಂದ ಲಾಕ್ ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿರುವುದು ವರದಿಯಾಗಿದೆ.
ಏಪ್ರಿಲ್ 5 ರಿಂದಲೇ 7 ದಿನಗಳ ಲಾಕ್ ಡೌನ್ ಹೇರಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕೇವಲ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಹೇಳಲಾ ಗಿದೆ. ಲಾಕ್ ಡೌನ್ ಬಗ್ಗೆ ಬಾಂಗ್ಲಾದೇಶ ಸಾರಿಗೆ ಸಚಿವ ಒಬೇದುಲ್ ಖಾದರ್ ಅವರು ಘೋಷಣೆ ಮಾಡಿ ದ್ದಾರೆ. ಬಾಂಗ್ಲಾದೇಶದಲ್ಲಿ ಕಳೆದ 7 ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶುಕ್ರವಾರ ಬಾಂಗ್ಲಾದೇಶದಲ್ಲಿ 6,830 ಹೊಸ ಸೋಂಕು ಪ್ರಕರಣಗಳು ವರದಿ ಯಾಗಿವೆ. ಹೊಸ ಸೋಂಕಿತರ ಪ್ರಮಾಣದಲ್ಲಿ ಏಕಾಏಕಿ ಶೇ.23.28ರಷ್ಟು ಏರಿಕೆಯಾಗಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ