ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Earthquake: ಮಯನ್ಮಾರ್‌ನಲ್ಲಿ ಭೂಕಂಪ; 20 ಕ್ಕೂ ಅಧಿಕ ಮಂದಿ ಸಾವು, ಮುಂದುವರಿದ ರಕ್ಷಣಾ ಕಾರ್ಯ

ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಭೂ ಕಂಪದ ತೀವೃತೆ 7.7 ಎಂದು ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆ. ಪಕ್ಕದ ಮಯನ್ಮಾರ್‌ನಲ್ಲಿಂದು ಎರಡೆರಡು ಬಾರಿ ಪ್ರಬಲ ಭೂಕಂಪ ಸಂಭವಿಸಿದೆ. ಮೊದಲ ಭೂಕಂಪ ಸಂಭವಿಸಿದ 15 ನಿಮಿಷಗಳಲ್ಲೇ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ.

ಮಯನ್ಮಾರ್‌ನಲ್ಲಿ ಭೂಕಂಪ; 20 ಕ್ಕೂ ಅಧಿಕ ಮಂದಿ ಸಾವು

Profile Vishakha Bhat Mar 28, 2025 4:54 PM

ನೈಪಿಡಾವ್ : ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಭೂ ಕಂಪದ ತೀವೃತೆ 7.7 ಎಂದು ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆ. ಪಕ್ಕದ ಮಯನ್ಮಾರ್‌ನಲ್ಲಿಂದು ಎರಡೆರಡು ಬಾರಿ ಪ್ರಬಲ ಭೂಕಂಪ (Earthquake) ಸಂಭವಿಸಿದೆ. ಮೊದಲ ಭೂಕಂಪ ಸಂಭವಿಸಿದ 15 ನಿಮಿಷಗಳಲ್ಲೇ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದೆ. ಸಾಗಿಂಗ್ ನಗರದ ವಾಯುವ್ಯಕ್ಕೆ 16 ಕಿ.ಮೀ ದೂರದಲ್ಲಿ ಮತ್ತು 10 ಕಿ.ಮೀ ಆಳದಲ್ಲಿ ಇದರ ಕೇಂದ್ರಬಿಂದು ಇತ್ತು ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮ್ಯಾನ್ಮಾರ್‌ನಲ್ಲಿ ಇಲ್ಲಿಯವರೆಗೆ 20 ಸಾವುಗಳು ಸಂಭವಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮಂಡಲೇ ನಗರದ ಮಸೀದಿಯೊಂದು ಒಳಗೆ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಕುಸಿದು ಬಿದ್ದಿದೆ. ಮ್ಯಾನ್ಮಾರ್ ರಾಜಧಾನಿ ನೇಪಿಡಾವ್‌ನಲ್ಲಿರುವ 1,000 ಹಾಸಿಗೆಗಳ ಆಸ್ಪತ್ರೆಯನ್ನು ಸಜ್ಜುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಭೂಕಂಪದ ಪರಿಣಾಮವು ಮಯನ್ಮಾರ್‌ಗೆ ಮಾತ್ರ ಸೀಮಿತವಾಗಿಲ್ಲ. ಪಕ್ಕದ ದೇಶಗಳಾದ ಥೈಲ್ಯಾಂಡ್‌ನ ಬ್ಯಾಂಕಾಕ್ ಮತ್ತು ಭಾರತದ ಈಶಾನ್ಯ ರಾಜ್ಯಗಳಲ್ಲಿ ಸಹ ಕಂಪನ ಅನುಭವಿಸಲಾಗಿದೆ. ಬ್ಯಾಂಕಾಕ್‌ನಲ್ಲಿ ಗಗನಚುಂಬಿ ಕಟ್ಟಡಗಳು ನಡುಗಿದ್ದು, ಸ್ವಿಮ್ಮಿಂಗ್ ಪೂಲ್‌ಗಳಿಂದ ನೀರು ಚೆಲ್ಲಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮಯನ್ಮಾರ್‌ನಲ್ಲಿ ಕಟ್ಟಡಗಳು ಮತ್ತು ಸೇತುವೆಗಳು ಕುಸಿದಿದ್ದು, 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಮ್ಯಾನ್ಮಾರ್‌ನ ಆಡಳಿತಾರೂಢ ಸೇನೆಯು ಹಲವಾರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಭೂಕಂಪದ ಕೇಂದ್ರ ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ ಮಂಡಲೆಯಿಂದ ಸುಮಾರು 17.2 ಕಿ.ಮೀ ದೂರದಲ್ಲಿದೆ, ಇದು ಸುಮಾರು 1.2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ಕಟ್ಟಡ ಕುಸಿತದಿಂದಾಗಿ 90 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ: Earthquake : ಮಯನ್ಮಾರ್‌ನಲ್ಲಿ 7.2 ತೀವ್ರತೆಯ ಭೂಕಂಪ: ದೆಹಲಿ,ಬ್ಯಾಂಕಾಕ್‌ ಸೇರಿದಂತೆ ಹಲವು ಕಡೆ ಕಂಪನದ ಅನುಭವ

ಮಯನ್ಮಾರ್‌ನಲ್ಲಿ ನಡೆದ ಘಟನೆಗೆ ಭಾರತ ಸರ್ಕಾರ ಕೂಡ ಸಂತಾಪ ಸೂಚಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. "ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಮಯನ್ಮಾರ್‌ನಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ದೆಹಲಿ, ಉತ್ತರ ಪ್ರದೇಶ, ಈಶಾನ್ಯ ರಾಜ್ಯ ಸೇರಿದಂತೆ ಹಲವು ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಚೀನಾ ಹಾಗೂ ಬಾಂಗ್ಲಾದೇಶದಲ್ಲಿಯೂ ಕೂಡ ಕಂಪನದ ಅನುಭವಾಗಿದೆ .