Saturday, 14th December 2024

ಪೇಶಾವರದಲ್ಲಿ ಭಾರಿ ಮಳೆ: ಒಂಭತ್ತು ಸಾವು

ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ 9 ಮಂದಿ ಮೃತಪಟ್ಟು, 17 ಜನರು ಗಾಯಗೊಂಡಿದ್ದಾರೆ.

ಚಿತ್ರಾಲ್, ದಿರ್, ಮನ್ಸೆಹ್ರಾ ಮತ್ತು ಸ್ವಾತ್ ಸೇರಿದಂತೆ ಗುಡ್ಡಗಾಡು ಮತ್ತು ಪರ್ವತ ಪ್ರದೇಶಗಳ ಜಿಲ್ಲೆಗಳಲ್ಲಿ ಸಾವು-ನೋವು ಸಂಭವಿಸಿವೆ. ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ವರದಿಯಾಗಿದೆ.

ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ.