ಮಾಸ್ಕೊ, ಏ. 1: ಬುಧವಾರ (ಏ. 1) ಮುಂಜಾನೆ ರಷ್ಯಾದ ಮಿಲಿಟರಿ ಸಾರಿಗೆ ವಿಮಾನವು ಕ್ರೈಮಿಯಾದಲ್ಲಿ ಬಂಡೆಗೆ ಅಪ್ಪಳಿಸಿದ (Military plane crash) ಪರಿಣಾಮ ಅದರಲ್ಲಿದ್ದ ಎಲ್ಲ 29 ಜನರು ಮೃತಪಟ್ಟಿದ್ದಾರೆ. ಟೇಕ್ ಆಫ್ ಆದ ಮೇಲೆ ಸಂಪರ್ಕ ಕಳೆದುಕೊಂಡಿದ್ದ ಆನ್-26 ವಿಮಾನವು 2014ರಲ್ಲಿ ರಷ್ಯಾವು (Russia) ಉಕ್ರೇನ್‌ನಿಂದ ಸ್ವಾಧೀನಪಡಿಸಿಕೊಂಡ ಕಪ್ಪು ಸಮುದ್ರ ಪರ್ಯಾಯ ದ್ವೀಪದಲ್ಲಿ ಪತನಗೊಂಡಿತು. ರಕ್ಷಣಾ ಸಚಿವಾಲಯವು 23 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದೆ. ಯಾರೂ ಬದುಕುಳಿದ ಬಗ್ಗೆ ವರದಿಯಾಗಿಲ್ಲ.
ಈ ಹಿಂದೆ ಸಂಪರ್ಕ ಕಡಿತಗೊಂಡಿದ್ದ AN-26 ವಿಮಾನವು ಬಂಡೆಗೆ ಅಪ್ಪಳಿಸಿತು. ಅಪಘಾತದ ಸ್ಥಳವನ್ನು ಪತ್ತೆಹಚ್ಚಲಾಗಿದೆ. ಆದರೆ ಅಪಘಾತಕ್ಕೆ ಕಾರಣವಾದ, ನಿಖರವಾದ ಸಂದರ್ಭಗಳ ಕುರಿತು ಅಧಿಕಾರಿಗಳು ಇನ್ನೂ ಹೆಚ್ಚಿನ ವಿವರಗಳನ್ನು ನೀಡಿಲ್ಲ. ಪ್ರಸ್ತುತ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
ರಷ್ಯಾದ ವಿಮಾನ ಪತನ:
ವಿಮಾನ ಅಪಘಾತಕ್ಕೆ ತಾಂತ್ರಿಕ ದೋಷವೇ ಕಾರಣ ಎಂದು ಪರಿಗಣಿಸಲಾಗುತ್ತಿದ್ದು, ಅಧಿಕೃತವಾಗಿ ದೃಢಪಡಿಸಲಾಗಿಲ್ಲ. ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿದೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂದು ನಿರ್ಧರಿಸಲು ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ತನಿಖೆ ಮತ್ತು ಸ್ಥಳದಲ್ಲಿ ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ, ದಾಳಿಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯು ರಷ್ಯಾದ ಮಿಲಿಟರಿ ಸಾರಿಗೆ ಕಾರ್ಯಾಚರಣೆಗಳ ಸುರಕ್ಷತೆಯ ಬಗ್ಗೆ ಹೊಸ ಕಳವಳವನ್ನು ಹುಟ್ಟುಹಾಕಿದೆ. ಈ ಪ್ರದೇಶದಲ್ಲಿ ಹೆಚ್ಚಿದ ಸಂಘರ್ಷದ ನಡುವೆ ಈ ಘಟನೆ ಸಂಭವಿಸಿದೆ.
ಅಮೆರಿಕ ಉಕ್ರೇನ್‌ಗೆ ಸಹಾಯ ಮಾಡುವುದನ್ನು ನಿಲ್ಲಿಸಿದರೆ ಇರಾನ್ ಜತೆಗಿನ ಸಂಬಂಧ ಕಡಿತ?
ಉಕ್ರೇನ್ ದಾಳಿಯ ಅನುಮಾನವಿಲ್ಲ
ರಷ್ಯಾದ ವಿಮಾನದ ಮೇಲೆ ಉಕ್ರೇನ್ ದಾಳಿಯ ಸಾಧ್ಯತೆಯ ಬಗ್ಗೆ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂದು ರಕ್ಷಣಾ ಸಚಿವಾಲಯವು ಹೇಳಿದೆ. ಮೇಲ್ನೋಟಕ್ಕೆ ಪರ್ವತಕ್ಕೆ ಡಿಕ್ಕಿ ಹೊಡೆದ ನಂತರ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಆನ್ - 26 ಅವಳಿ ಎಂಜಿನ್ ಟರ್ಬೊಪ್ರೊಪ್ ವಿಮಾನವಾಗಿದ್ದು, 40 ಸೈನಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಇದನ್ನು ಪ್ಯಾರಾಟ್ರೂಪರ್‌ಗಳನ್ನು ನಿಯೋಜಿಸಲು ಮತ್ತು ಗಾಯಾಳುಗಳನ್ನು ಸ್ಥಳಾಂತರಿಸಲು ವಿನ್ಯಾಸಗೊಳಿಸಲಾಗಿದೆ.
ಮಶಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ
ಇತ್ತ ಇರಾನ್‌ನ ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಮಹರ್ ಏರ್‌ಗೆ ಸಂಬಂಧಿಸಿದ ವಿಮಾನಕ್ಕೆ ಹಾನಿಯಾಗಿದ್ದು, ಮಾನವೀಯ ನೆರವು ಸಂಗ್ರಹಿಸುವ ಭಾರತಕ್ಕೆ ಅಡ್ಡಿಪಡಿಸುವ ಸಾಧ್ಯತೆಯಿದೆ ಎಂದು ಇರಾನ್ ಅಧಿಕಾರಿಗಳು ಹೇಳಿದ್ದಾರೆ. ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿಯ ನಂತರ ವಿಮಾನ ಹಾನಿಗೊಳಗಾಗಿದೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವು ಏಪ್ರಿಲ್ 1ರಂದು ದೆಹಲಿಗೆ ಆಗಮಿಸುವ ನಿರೀಕ್ಷೆಯಿತ್ತು.