ಸಾರ್ವಜನಿಕ ಬಸ್ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 40 ಮಂದಿ ಸಾವನ್ನಪ್ಪಿದ್ದು, 85ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾ ಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಈ ದುರಂತ ಘಟನೆಯಿಂದ ದುಃಖಿತನಾಗಿದ್ದೇನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರ ಚೇತರಿಸಿ ಕೊಳ್ಳಲಿ. ಅವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುವುದು ಎಂದು ಅಧ್ಯಕ್ಷ ಮ್ಯಾಕಿ ಸಾಲ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಸೋಮವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದ ಅವರು, ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು ಸಭೆ ನಡೆಸುವುದಾಗಿ ಹೇಳಿದ್ದಾರೆ.