#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Narendra Modi: AI ಉದ್ಯೋಗ ಕಡಿತಗೊಳಿಸುವುದಿಲ್ಲ, ಹೊಸ ಅವಕಾಶ ಸೃಷ್ಟಿಸುತ್ತೆ; ಶೃಂಗ ಸಭೆಯಲ್ಲಿ ಮೋದಿ ಮಾತು

ಮಾನವರ ದೈನಂದಿನ ಜೀವನದಲ್ಲಿ ಕೃತಕ ಬುದ್ಧಿಮತ್ತೆ ಹೇಗೆ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂಬುದರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ AI ಶೃಂಗಸಭೆಯಲ್ಲಿ ಮಾತನಾಡಿದ್ದಾರೆ. ಕೃತಕ ಬುದ್ಧಿಮತ್ತೆಯು ಜಾಗತಿಕ ಉದ್ಯೋಗ ನಷ್ಟಕ್ಕೆ ಕಾರಣವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ

AI ಶೃಂಗ ಸಭೆಯಲ್ಲಿ ತಂತ್ರಜ್ಞಾನವನ್ನು ಶ್ಲಾಘಿಸಿದ ಮೋದಿ

Narendra Modi

Profile Vishakha Bhat Feb 11, 2025 4:55 PM

ಪ್ಯಾರಿಸ್‌: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ ಪ್ರವಾಸದಲ್ಲಿದ್ದು, ಪ್ಯಾರಿಸ್‌ನಲ್ಲಿ ನಡೆದ AI ಶೃಂಗಸಭೆಯಲ್ಲಿ ಭಾಗವಹಿಸಿದ ಅವರು ಕೃತಕ ಬುದ್ಧಿಮತ್ತೆಯು ಜಾಗತಿಕ ಉದ್ಯೋಗ ನಷ್ಟಕ್ಕೆ ಕಾರಣವಾಗುವುದಿಲ್ಲ ಎಂದು ಹೇಳಿದ್ದಾರೆ. ಮಾನವರ ದೈನಂದಿನ ಜೀವನದಲ್ಲಿ ಕೃತಕ ಬುದ್ಧಿಮತ್ತೆ ಹೇಗೆ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂಬುದರ ಕುರಿತು ಅವರು ಮಾತನಾಡಿದ್ದಾರೆ. ಈ ಶತಮಾನದಲ್ಲಿ ಕೃತಕ ಬುದ್ಧಿಮತ್ತೆ (Artificial intelligence) ಮಾನವೀಯತೆಯ ಸಂಕೇತಗಳನ್ನು ಬರೆಯುತ್ತಿದೆ ಎಂದು ಪ್ರಧಾನಿ ಅಭಿಪ್ರಾಯ ಪಟ್ಟಿದ್ದಾರೆ.

ಪ್ಯಾರಿಸ್‌ನಲ್ಲಿ ನಡೆದ AI ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹೊಸ ತಂತ್ರಜ್ಞಾನದ ಬಗ್ಗೆ ಮಾತನಾಡಿದ್ದಾರೆ. ನಾವು ನಮ್ಮ ಸಂಪನ್ಮೂಲಗಳು ಮತ್ತು ಪ್ರತಿಭೆಯನ್ನು ಒಟ್ಟುಗೂಡಿಸಬೇಕು ಮತ್ತು ವಿಶ್ವಾಸ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ಮೂಲಕ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದ್ದಾರೆ. AI ತಂತ್ರಜ್ಞಾನದ ಬಗ್ಗೆ ಮಾತನಾಡುತ್ತಾ, ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ನಷ್ಟವಾಗುವ ಬಗ್ಗೆ ಊಹಾಪೋಹಗಳಿವೆ, ಆದರೆ ಹೊಸ ತಂತ್ರಜ್ಞಾನವು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.



ಭಾರತದಲ್ಲಿನ AI ಕ್ರಾಂತಿಯ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡುತ್ತಾ, "ಭಾರತವು 1.4 ಶತಕೋಟಿಗೂ ಹೆಚ್ಚು ಜನರಿಗೆ ಡಿಜಿಟಲ್ ಸೌಲಭ್ಯವನ್ನು ಉಪಯೋಗಿಸುತ್ತಿದ್ದಾರೆ. ನಮ್ಮ ಆರ್ಥಿಕತೆಯನ್ನು ಆಧುನೀಕರಿಸಲು, ಆಡಳಿತವನ್ನು ಸುಧಾರಿಸಲು ಮತ್ತು ನಮ್ಮ ಜನರ ಜೀವನವನ್ನು ಪರಿವರ್ತಿಸಲು ಪರಿಣಾಮಕಾರಿಯಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು. AI ನ ಬಾಧಕತೆಯ ಬಗ್ಗೆಯೂ ಮಾತನಾಡಿದ ಮೋದಿ ಡೀಪ್‌ಫೇಕ್‌ಗಳ ಬೆದರಿಕೆಗಳಿಂದ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Narendra Modi: ಫ್ರಾನ್ಸ್‌ನ ಎಐ ಶೃಂಗಸಭೆಯಲ್ಲಿ ಮೋದಿ ಭಾಗಿ- ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜತೆ ಮಾತುಕತೆ

ಶೃಂಗ ಸಭೆಯಲ್ಲಿ ಭಾಗವಹಿಸಲು ತೆರಳಲಿರುವ ಮೋದಿಗೆ ಫ್ರಾನ್ಸ್‌ನಲ್ಲಿ ಅದ್ಧೂರಿ ಸ್ವಾಗತ ದೊರಕಿದೆ. ನಾಳೆ ಮೋದಿ ಅಮೆರಿಕಕ್ಕೆ ಪ್ರಯಾಣಿಸಲಿದ್ದಾರೆ. ಅಲ್ಲಿ ಟ್ರಂಪ್‌ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.