ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bomb Threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಫುಕೆಟ್‌ನಲ್ಲಿ ತುರ್ತು ಭೂಸ್ಪರ್ಶ

ಥೈಲ್ಯಾಂಡ್‌ನ ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಶುಕ್ರವಾರ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ಕುರಿತು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ. ವಿಮಾನವು ಸುರಕ್ಷಿತವಾಗಿ ಇಳಿಯಿತು.

ಬ್ಯಾಂಕಾಕ್‌: ಥೈಲ್ಯಾಂಡ್‌ನ ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ (Bomb Threat) ಇಂಡಿಯಾ (Air India) ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಶುಕ್ರವಾರ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ಕುರಿತು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ. ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಫುಕೆಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಡ್ಡಾಯ ಭದ್ರತಾ ತಪಾಸಣೆಗೆ ಒಳಗಾಗಿದೆ ಎಂದು ಅಧಿಕಾರಿಗಳು ಹೇಳಿದರು. ತುರ್ತು ಯೋಜನೆಗಳಿಗೆ ಅನುಗುಣವಾಗಿ ಪ್ರಯಾಣಿಕರನ್ನು ವಿಮಾನ AI 379 ನಿಂದ ಹೊರಗೆ ಕರೆದೊಯ್ಯಲಾಗಿದೆ.

ಪ್ರಾಥಮಿಕ ಶೋಧದ ನಂತರ ಅಧಿಕಾರಿಗಳು ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ನಂತರ ವರದಿಯಾಗಿದೆ. ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಕಂಡುಬಂದ ಹಿನ್ನಲೆ ಪ್ರಯಾಣಿಕನನ್ನು ಥಾಯ್ ವಿಮಾನ ನಿಲ್ದಾಣದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಶುಕ್ರವಾರ ಸ್ಥಳೀಯ ಸಮಯ ಬೆಳಿಗ್ಗೆ 9:30 ಕ್ಕೆ ಫುಕೆಟ್ ವಿಮಾನ ನಿಲ್ದಾಣದಿಂದ ಭಾರತದ ರಾಜಧಾನಿಗೆ ಹೊರಟ ವಿಮಾನವು ಅಂಡಮಾನ್ ಸಮುದ್ರದ ಸುತ್ತಲೂ ವಿಶಾಲವಾದ ಲೂಪ್ ಮಾಡಿ ಥಾಯ್ ದ್ವೀಪದಲ್ಲಿ ಮತ್ತೆ ಇಳಿಯಿತು ಎಂದು ಫ್ಲೈಟ್ ಟ್ರ್ಯಾಕರ್ ಫ್ಲೈಟ್‌ರಾಡರ್ 24 ತಿಳಿಸಿದೆ. ವಿಮಾನದಲ್ಲಿ 156 ಪ್ರಯಾಣಿಕರಿದ್ದರು ಮತ್ತು ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಬಾಂಬ್‌ ಬೆದರಿಕೆ ಕುರಿತು ಏರ್‌ ಇಂಡಿಯಾ ಇದುವರೆಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಕಳೆದ ವರ್ಷ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಹಲವಾರು ಬಾಂಬ್ ಬೆದರಿಕೆ ಬಂದಿದೆ. ಗುರುವಾರ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿ 240 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಘಟನೆಯ ನಂತರ ಏರ್‌ ಇಂಡಿಯಾಗೆ ಬೆದರಿಕೆ ಕರೆ ಬಂದಿದೆ. ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಗುರುವಾರ (ಜೂನ್ 12) ಮಧ್ಯಾಹ್ನ (Ahmedabad Plane Crash) ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿ ನಗರ ಪ್ರದೇಶದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಲಂಡನ್‌ಗೆ ತೆರಳುತ್ತಿದ್ದ ವಿಮಾನವು ಮಧ್ಯಾಹ್ನ 13:38 ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತು. 825 ಅಡಿಗಳಷ್ಟು ಕಡಿಮೆ ಎತ್ತರದಲ್ಲಿ ಲಿಫ್ಟ್ ಪಡೆಯುವಲ್ಲಿ ವಿಫಲವಾಗಿದೆ.

ಈ ಸುದ್ದಿಯನ್ನೂ ಓದಿ: Vijay Rupani: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿಗೆ ಕೈಕೊಟ್ಟ ಲಕ್ಕಿ ನಂಬರ್‌; ಏನಿದು ಸಂಖ್ಯೆಯ ರಹಸ್ಯ?

ಟಾಟಾ ಗ್ರೂಪ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಏರ್ ಇಂಡಿಯಾ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ (N.Chandrasekaran) ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿ, ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.