Saudi Arabia Bus Accident: ಹೊತ್ತಿ ಉರಿಯುತ್ತಿದ್ದ ಬಸ್‌ನಿಂದ ಬದುಕಿ ಬಂದ ಏಕೈಕ ವ್ಯಕ್ತಿ ಈತ! ಸೌದಿ ಅಪಘಾತದ ಭೀಕರತೆ ಇಲ್ಲಿದೆ
Bus Accident: ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾ ಬಳಿ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, 40 ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಅಚ್ಚರಿಯ ರೀತಿಯಲ್ಲಿ 24 ವರ್ಷದ ಮೊಹಮ್ಮದ್ ಅಬ್ದುಲ್ ಶೋಯಾಬ್ ಎನ್ನುವಾತ ಬದುಕುಳಿದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ (ಸಂಗ್ರಹ ಚಿತ್ರ) -
ರಿಯಾದ್: ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ (Saudi Arabia Bus Accident) ಮದೀನಾ ಬಳಿ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, 40 ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಅಚ್ಚರಿಯ ರೀತಿಯಲ್ಲಿ 24 ವರ್ಷದ ಮೊಹಮ್ಮದ್ ಅಬ್ದುಲ್ ಶೋಯಾಬ್ ಎನ್ನುವಾತ ಬದುಕುಳಿದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಆದರೆ ಅವರ ಸ್ಥಿತಿ ಕುರಿತು ಇನ್ನೂ ಮಾಹಿತಿ ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಮೃತರಲ್ಲಿ ಹೆಚ್ಚಿನವರು ಹೈದರಾಬಾದ್ ನಿವಾಸಿಗಳು ಎಂದು ವರದಿಯಾಗಿದೆ. ಈ ಪೈಕಿ 16 ಮಂದಿ ಮಲ್ಲೇಪಲ್ಲಿ ನಿವಾಸಿಗಳು.
ಭಾನುವಾರ ಸುಮಾರು ರಾತ್ರಿ 11 ಗಂಟೆ (ಸೌದಿ ಅರೇಬಿಯಾ ಕಾಲಮಾನ) ಸುಮಾರಿಗೆ ಬಸ್ ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಹೆಚ್ಚಿನವರು ತೆಲಂಗಾಣದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದರು ಎನ್ನಲಾಗಿದೆ. ಮಲ್ಲೇಪಲ್ಲಿ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣಿಸುತ್ತಿದ್ದರು. ಅಪಘಾತದ ನಂತರ, ಜೆಡ್ಡಾದ ಭಾರತೀಯ ಕಾನ್ಸುಲೇಟ್ ಜನರಲ್ 24/7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ ಮತ್ತು ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.
ಪ್ರಸ್ತುತ ರಷ್ಯಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ಅಪಘಾತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. "ರಿಯಾದ್‌ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಜೆಡ್ಡಾದ ದೂತಾವಾಸವು ಈ ಅಪಘಾತದಲ್ಲಿ ಹಾನಿಗೊಳಗಾದ ಭಾರತೀಯ ಪ್ರಜೆಗಳು ಮತ್ತು ಕುಟುಂಬಗಳಿಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ" ಎಂದು ಅವರು ಹೇಳಿದರು. "ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ತೈಲ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದಿದೆ. ರಕ್ಷಣಾ ಕಾರ್ಯಾಚರಣೆಗಳು ಮುಂದುವರೆಯುತ್ತಿವೆ.
ಈ ಸುದ್ದಿಯನ್ನೂ ಓದಿ: Pak Defence Minister: ಭಾರತದೊಂದಿಗೆ ಯುದ್ಧ ನಡೆದರೆ ಸೌದಿ ನಮ್ಮನ್ನು ಕಾಪಾಡುತ್ತದೆ; ಪಾಕ್ ರಕ್ಷಣಾ ಸಚಿವನಿಂದ ಹೊಸ ಹೇಳಿಕೆ
ಘಟನೆಗೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕೂಡ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ ನಂತರ ತೆಲಂಗಾಣ ಸರ್ಕಾರವು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಅಧಿಕೃತ ಹೇಳಿಕೆಯಲ್ಲಿ, ಮುಖ್ಯಮಂತ್ರಿ ರೇವಂತ್ ರೆಡ್ಡಿ ನವದೆಹಲಿಯಲ್ಲಿನ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಮತ್ತು ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸಲು ಸೂಚಿಸಿದ್ದಾರೆ ಎಂದು ರಾಜ್ಯ ಸರ್ಕಾರ ದೃಢಪಡಿಸಿದೆ.
ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಹೈದರಾಬಾದ್‌ನ ಹಲವಾರು ನಿವಾಸಿಗಳು ಇದ್ದರು ಎಂದು ತೆಲಂಗಾಣ ಸಿಎಂಒ ತಿಳಿಸಿದೆ. ಹೈದರಾಬಾದ್‌ನ ಮುಖ್ಯ ಕಾರ್ಯದರ್ಶಿ ರಾಮಕೃಷ್ಣ ರಾವ್ ಅವರು ದೆಹಲಿಯಲ್ಲಿರುವ ರೆಸಿಡೆಂಟ್ ಕಮಿಷನರ್ ಗೌರವ್ ಉಪ್ಪಲ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ನಮ್ಮ ರಾಜ್ಯಕ್ಕೆ ಸೇರಿದ ಎಷ್ಟು ಜನರಿದ್ದಾರೆ ಎಂಬುದರ ಕುರಿತು ವಿವರಗಳನ್ನು ಸಂಗ್ರಹಿಸಿ, ಸಿಎಂಒ ಪ್ರಕಾರ ತಕ್ಷಣವೇ ಒದಗಿಸುವಂತೆ ಅವರು ಆದೇಶಿಸಿದ್ದಾರೆ.