ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Donald Trump: ಮೋದಿ ಯಾವಗಲೂ ನನ್ನ ಉತ್ತಮ ಸ್ನೇಹಿತ; ಉಲ್ಟಾ ಹೊಡೆದ ಟ್ರಂಪ್‌

ನಿನ್ನೆಯಷ್ಟೇ ಚೀನಾಗೋಸ್ಕರ ಭಾರತ ಹಾಗೂ ರಷ್ಯಾ ಕಳೆದುಕೊಂಡಿದ್ದೆ ಎಂದು ಹೇಳಿದ್ದ ಟ್ರಂಪ್‌ (Donald Trump) ಇಂದು ವರಸೆ ಬದಲಿಸಿದ್ದಾರೆ. ಹೇಳಿಕೆಯ ಕೆಲವೇ ಗಂಟೆಗಳ ನಂತರ, ರಿಪಬ್ಲಿಕನ್ ಈಗ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ (Narendra Modi) ನಾನು ತುಂಬಾ ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.

ವಾಷಿಂಗ್ಟನ್‌: ನಿನ್ನೆಯಷ್ಟೇ ಚೀನಾಗೋಸ್ಕರ ಭಾರತ ಹಾಗೂ ರಷ್ಯಾ ಕಳೆದುಕೊಂಡಿದ್ದೆ ಎಂದು ಹೇಳಿದ್ದ ಟ್ರಂಪ್‌ (Donald Trump) ಇಂದು ವರಸೆ ಬದಲಿಸಿದ್ದಾರೆ. ಹೇಳಿಕೆಯ ಕೆಲವೇ ಗಂಟೆಗಳ ನಂತರ, ರಿಪಬ್ಲಿಕನ್ ಈಗ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ (Narendra Modi) ನಾನು ತುಂಬಾ ಚೆನ್ನಾಗಿದ್ದೇನೆ ಎಂದು ಮೋದಿ ಅಮೆರಿಕ್ಕೆ ಭೇಟಿ ನೀಡಿದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ನಿನ್ನೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಪ್ರಧಾನಿ ಮೋದಿ ಅವರ ಚಿತ್ರವನ್ನು ಟ್ರಂಪ್ ಹಂಚಿಕೊಂಡಿದ್ದರು. ಇದೀಗ ಮತ್ತೆ ಮೋದಿಯನ್ನು ತನ್ನ ಸ್ವೇಹಿತ ಎಂದು ಬಣ್ಣಿಸಿದ್ದಾರೆ.

ಭಾರತ ರಷ್ಯಾದಿಂದ ಇಷ್ಟೊಂದು ತೈಲ ಖರೀದಿಸುತ್ತಿದೆ ಎಂದು ತಿಳಿದು ನನಗೆ ತುಂಬಾ ನಿರಾಶೆಯಾಗಿದೆ. ನಾನು ಅದನ್ನು ಅವರಿಗೆ ತಿಳಿಸಿದೆ. ನಾವು ಭಾರತದ ಮೇಲೆ ಬಹಳ ದೊಡ್ಡ ಸುಂಕವನ್ನು ವಿಧಿಸಿದ್ದೇವೆ - ಶೇಕಡಾ 50, ತುಂಬಾ ಹೆಚ್ಚಿನ ಸುಂಕ. ಆದರೆ ವಯಕ್ತಿಕವಾಗಿ ನಾನು ಹಾಗೂ ಮೋದಿ ಉತ್ತಮವಾಗಿದ್ದೇವೆ. ನಮ್ಮಿಬ್ಬರ ನಡುವೆ ಒಳ್ಳೆಯ ಸ್ನೇಹವಿದೆ. ಎರಡು ತಿಂಗಳ ಹಿಂದೆ ಅವರು ಇಲ್ಲಿಗೆ ಆಗಮಿಸಿದ್ದರು. ನಾವು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದೆವು ಎಂದು ಮೋದಿ ಅಮೆರಿಕ ಭೇಟಿಯನ್ನು ಟ್ರಂಪ್‌ ಮೆಲುಕು ಹಾಕಿದರು. ಟ್ರಂಪ್ ಕೆಲವು ವಾರಗಳ ಹಿಂದೆ ಭಾರತೀಯ ಆಮದಿನ ಮೇಲೆ 50% ಸುಂಕವನ್ನು ಘೋಷಿಸಿದ್ದರು, ಅದು ಆಗಸ್ಟ್ 27 ರಿಂದ ಜಾರಿಗೆ ಬಂದಿತು. ಈ ಸುಂಕಗಳಲ್ಲಿ ಅರ್ಧದಷ್ಟು ಭಾರತದ ರಷ್ಯಾದೊಂದಿಗಿನ ತೈಲ ವ್ಯಾಪಾರಕ್ಕೆ ದಂಡವಾಗಿ ಘೋಷಿಸಲಾಗಿದೆ.

ಟ್ರಂಪ್‌ ಹೇಳಿಕೆಯ ನಡುವೆ, ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತದೆ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್‌ ಲುಟ್ನಿಕ್‌ ಹೇಳಿಕೆ ನೀಡಿದ್ದಾರೆ. ರಷ್ಯಾದ ತೈಲವನ್ನು ಖರೀದಿಸದಂತೆ ಅಮೆರಿಕದ ಒತ್ತಡಕ್ಕೆ ಭಾರತ ಮಣಿದಿಲ್ಲ. ಆದರೂ, ಕೆಲವೇ ತಿಂಗಳುಗಳಲ್ಲಿ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಭಾರತ ಮತ್ತೆ ಬರುತ್ತದೆ ಎಂದು ಲುಟ್ನಿಕ್‌ ತಿಳಿಸಿದ್ದಾರೆ. ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ಕ್ಷಮಿಸಿ ಅಂತ ಕೇಳುತ್ತಾರೆ. ಡೊನಾಲ್ಡ್ ಟ್ರಂಪ್ ಜೊತೆ ಒಪ್ಪಂದ ಮಾಡಿಕೊಳ್ಳಲು ಮತ್ತೆ ಪ್ರಯತ್ನಿಸುತ್ತಾರೆಂದು ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Stock Market: ಟ್ರಂಪ್‌ ಟಾರಿಫ್‌ ಮುಂದೂಡಿಕೆ, ಟೆಕ್ಸ್‌ಟೈಲ್‌ ಷೇರುಗಳಿಗೆ ಶುಕ್ರದೆಸೆ! ಬಾಂಗ್ಲಾಗೆ ಬಿತ್ತು ಟ್ರಂಪ್‌ ಟ್ಯಾಕ್ಸ್‌

ಒಂದು ವೇಳೆ ಅಮೆರಿಕವನ್ನು ಬೆಂಬಲಿಸದಿದ್ದರೆ, ರಫ್ತಿನ ಮೇಲೆ ಶೇ.50 ರಷ್ಟು ಸುಂಕವನ್ನು ಭಾರತ ಪಾವತಿಸಬೇಕಾಗುತ್ತದೆ. ಭಾರತವು ತನ್ನ ಮಾರುಕಟ್ಟೆಯನ್ನು ತೆರೆಯಲು, ರಷ್ಯಾದ ತೈಲ ಖರೀದಿ ನಿಲ್ಲಿಸಲು ಮತ್ತು ಬ್ರಿಕ್ಸ್‌ನ ಭಾಗವಾಗುವುದನ್ನು ನಿಲ್ಲಿಸಲು ಬಯಸುವುದಿಲ್ಲ. ನೀವು ರಷ್ಯಾ ಮತ್ತು ಚೀನಾ ನಡುವೆ ಸೇತುವೆಯಾಗಲು ಬಯಸಿದರೆ, ಹೋಗಿ. ಆದರೆ ಡಾಲರ್ ಅನ್ನು ಬೆಂಬಲಿಸಿ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕವನ್ನು ಬೆಂಬಲಿಸಿ. ನಿಮ್ಮ ಅತಿದೊಡ್ಡ ಕ್ಲೈಂಟ್ ಅನ್ನು ಬೆಂಬಲಿಸಿ. ಇಲ್ಲದಿದ್ದರೆ, 50% ಸುಂಕಗಳನ್ನು ಪಾವತಿಸಿ. ಇದು ಎಷ್ಟು ಕಾಲ ಇರುತ್ತದೆ ಎಂದು ನೋಡೋಣ ಎಂದಿದ್ದಾರೆ.