ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Visa cancellation: ಅಮೆರಿಕ ವಿದ್ಯಾರ್ಥಿ ವೀಸಾಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರಾ? ಹಾಗಾದ್ರೆ ಈ ನಿಯಮಗಳು ನಿಮಗೆ ಗೊತ್ತಿರಲೇಬೇಕು?

ಅಮೆರಿಕ ಸರ್ಕಾರ ವಿದೇಶಿ ವಿದ್ಯಾರ್ಥಿಗಳಿಗೆ ವೀಸಾ ನೀಡಲು ಹಲವು ಕ್ರಮಗಳನ್ನು ಜಾರಿಗೆ ತಂದಿದೆ. ಈಗಾಗಲೇ ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಇದೀಗ ಅಮೆರಿಕಕ್ಕೆ ಶಿಕ್ಷಣಕ್ಕೆ ಎಂದು ಬರುವ ವಿದ್ಯಾರ್ಥಿಗಳಿಗೆ ಒಂದಷ್ಟು ಕ್ರಮವನ್ನು ಜಾರಿಗೆ ತಂದಿಗೆ.

ಅಮೆರಿಕ ವಿದ್ಯಾರ್ಥಿ ವೀಸಾಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರಾ? ಇದು ಓದಿ

Profile Vishakha Bhat May 28, 2025 3:15 PM

ವಾಷಿಂಗ್ಟನ್‌: ಅಮೆರಿಕ ಸರ್ಕಾರ ವಿದೇಶಿ ವಿದ್ಯಾರ್ಥಿಗಳಿಗೆ ವೀಸಾ (Visa cancellation) ನೀಡಲು ಹಲವು ಕ್ರಮಗಳನ್ನು ಜಾರಿಗೆ ತಂದಿದೆ. ಈಗಾಗಲೇ ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಇದೀಗ ಅಮೆರಿಕಕ್ಕೆ ಶಿಕ್ಷಣಕ್ಕೆ ಎಂದು ಬರುವ ವಿದ್ಯಾರ್ಥಿಗಳಿಗೆ ಒಂದಷ್ಟು ಕ್ರಮವನ್ನು ಜಾರಿಗೆ ತಂದಿಗೆ. ಡೊನಾಲ್ಡ್ ಟ್ರಂಪ್ ಆಡಳಿತವು ನಿಮ್ಮ ವೀಸಾ ಸಂದರ್ಶನಕ್ಕೂ ಮೊದಲು ನಿಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಪರಿಶೀಲಿಸುತ್ತದೆ. ಕಳೆದ ವರ್ಷ ಅಮೆರಿಕದಲ್ಲಿ ಪ್ಯಾಲಸ್ತೀನ್‌ ಪರವಾಗಿ ನಡೆದ ಪ್ರತಿಭಟನೆಯ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಎಲ್ಲಾ ವಿದ್ಯಾರ್ಥಿ ಮತ್ತು ವಿನಿಮಯ ಸಂದರ್ಶಕ (ಎಫ್, ಎಂ, ಜೆ) ವೀಸಾ ಅರ್ಜಿದಾರರು ಅರ್ಜಿದಾರರ ಆನ್‌ಲೈನ್ ಚಟುವಟಿಕೆಯನ್ನು ಪರಿಶೀಲಿಸಲು ಮತ್ತು ಆ ಮೂಲಕ ಪ್ರವೇಶಕ್ಕೆ ಅವರ ಅರ್ಹತೆಯನ್ನು ನಿರ್ಣಯಿಸಲು ಸಾಮಾಜಿಕ ಮಾಧ್ಯಮ ಪರಿಶೀಲನೆಯ ಕುರಿತು ನವೀಕರಿಸಿದ ಮಾರ್ಗದರ್ಶನವನ್ನು ನೀಡುವ ಯೋಜನೆಯನ್ನು ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್ ನಿರ್ದೇಶನವು ಸೂಚಿಸುತ್ತದೆ. ಅಧಿಕಾರಿಗಳು ವೀಸಾ ಅರ್ಜಿ ಪರಿಶೀಲನೆಗೂ ಮುನ್ನ ಸಾಮಾಜಿಕ ಜಾಲತಾಣದ ಪರಿಶೀಲನೆ ನಡೆಸಲಾಗುತ್ತದೆ.

ಅಮೆರಿಕದ ಸಾರ್ವಭೌಮತೆಗೆ ಧಕ್ಕೆ ತರುವ ಕೆಲಸವನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ. ದೇಶದಲ್ಲಿದ್ದುಕೊಂಡೇ ದೇಶಕ್ಕೆ ದ್ರೋಹ ಮಾಡಿದರೆ ಇಲ್ಲಿ ಜಾಗವಿಲ್ಲ ಎಂದು ಸರ್ಕಾರ ಹೇಳಿದೆ. ಡೊನಾಲ್ಡ್‌ ಟ್ರಂಪ್‌ (Donald Trump) ಅಮೆರಿಕದ ಅಧ್ಯಕ್ಷರಾಗಿ ಆಡಳಿತದಲ್ಲಿ ಕೆಲವು ಬದಲಾವಣೆಗಳನ್ನು ತರುತ್ತಿದ್ದಾರೆ. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ, ಹಾಗೂ ಕೆಲ ಪ್ರತಿಭಟನೆಗಳ ಕುರಿತಾಗಿ ತನಿಖೆ ನಡೆಯುತ್ತಿದೆ. ಪ್ಯಾಲಸ್ತೀನ್‌ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಭಾರತ ಸೇರಿದಂತೆ ಹಲವು ದೇಶಗಳ ವಿದ್ಯಾರ್ಥಿಗಳನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ. ನಂತರ ವಿಶ್ವ ವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ನಿಷೇಧ ಹೇರಲಾಗಿತ್ತು. ಇದಕ್ಕೂ ಮೊದಲು ಟ್ರಂಪ್‌ ಸರ್ಕಾರ ವಿಶ್ವವಿದ್ಯಾಲಯಕ್ಕೆ ನೀಡುವ 2.2 ಶತಕೋಟಿ ಡಾಲರ್ ಗಿಂತಲೂ ಹೆಚ್ಚಿನ ಅನುದಾನಗಳು ಮತ್ತು 60 ಮಿಲಿಯನ್ ಡಾಲರ್ ಒಪ್ಪಂದಗಳನ್ನು ಸ್ಥಗಿತಗೊಳಿತ್ತು.

ಈ ಸುದ್ದಿಯನ್ನೂ ಓದಿ: US-China: ಸುಂಕ ಯುದ್ಧಕ್ಕೆ ತೆರೆ ಎಳೆದು ತಾತ್ಕಾಲಿಕ ಒಪ್ಪಂದ ಮಾಡಿಕೊಂಡ ಅಮೆರಿಕ-ಚೀನಾ; ಶೇ.115ಕ್ಕೆ ಟಾರಿಫ್ ಕಡಿತ

ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿ ಹಂಚಿಕೊಂಡ ಇತ್ತೀಚಿನ ಪ್ರಕಟಣೆಯ ಪ್ರಕಾರ, ವಿದೇಶಿ ವಿದ್ಯಾರ್ಥಿಗಳು ತರಗತಿಗಳಿಗೆ ನಿರಂತರವಾಗಿ ಗೈರು ಹಾಜರಾದರೆ, ಅಥವಾ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿ ಕೊಂಡವರ ವೀಸಾವನ್ನು ರದ್ದುಗೊಳಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಕೋರ್ಸ್‌ಗಳನ್ನು ಅರ್ಧಕ್ಕೇ ತೊರೆದು ವಿಶ್ವವಿದ್ಯಾಲಯ ಹೋದರೆ ಅಂತವರ ವೀಸಾವನ್ನು ರದ್ದುಗೊಳಿಸಲಾಗುತ್ತದೆ ಎಂದು ಅಮೆರಿಕ ಆಡಳಿತ ಹೇಳಿದೆ. ಯಾವುದೇ ಸಮಸ್ಯೆಗಳನ್ನು ತಪ್ಪಿಸಲು ಯಾವಾಗಲೂ ನಿಮ್ಮ ವೀಸಾದ ನಿಯಮಗಳನ್ನು ಪಾಲಿಸಿ ಮತ್ತು ನಿಮ್ಮ ವಿದ್ಯಾರ್ಥಿ ಸ್ಥಿತಿಯನ್ನು ಕಾಪಾಡಿಕೊಳ್ಳಿ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.