Fire Accident: ಉತ್ತರ ಮೆಸಿಡೋನಿಯಾದ ನೈಟ್ ಕ್ಲಬ್‌ನಲ್ಲಿ ಬೆಂಕಿ ಅವಘಡ: 50 ಮಂದಿ ಸಾವು
ಉತ್ತರ ಮೆಸಿಡೋನಿಯಾದ ನೈಟ್‌ಕ್ಲಬ್‌ನಲ್ಲಿ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದ ಮ್ಯೂಸಿಕ್ ಕಾನ್ಸರ್ಟ್ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 50 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೊಕಾನಿ ಎಂಬ ಪಟ್ಟಣದಲ್ಲಿ ಸುಮಾರು 1,500 ಜನರು ಕಾನ್ಸರ್ಟ್ ಗಾಗಿ ಒಟ್ಟುಗೂಡಿದ್ದ ಡಿಸ್ಕೋಥೆಕ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಸಾಂದರ್ಭಿಕ ಚಿತ್ರ

ಸ್ಕೋಪ್ಜೆ: ಉತ್ತರ ಮೆಸಿಡೋನಿಯಾದ ನೈಟ್‌ಕ್ಲಬ್‌ನಲ್ಲಿ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದ ಮ್ಯೂಸಿಕ್ ಕಾನ್ಸರ್ಟ್ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡು (Fire Accident) ಕನಿಷ್ಠ 50 ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಕೋಪ್ಜೆಯಿಂದ ಪೂರ್ವಕ್ಕೆ 100 ಕಿ.ಮೀ (60 ಮೈಲುಗಳು) ದೂರದಲ್ಲಿರುವ ಕೊಕಾನಿ ಎಂಬ ಪಟ್ಟಣದಲ್ಲಿ ಸುಮಾರು 1,500 ಜನರು ಕಾನ್ಸರ್ಟ್ ಗಾಗಿ ಒಟ್ಟುಗೂಡಿದ್ದ ಡಿಸ್ಕೋಥೆಕ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಕೊಕಾನಿಯಲ್ಲಿರುವ "ಪಲ್ಸ್" ಎಂಬ ನೈಟ್‌ಕ್ಲಬ್‌ನಲ್ಲಿ ದೇಶದ ಪ್ರಸಿದ್ಧ ಹಿಪ್-ಹಾಪ್ ಜೋಡಿಯಾದ ಡಿಎನ್‌ಕೆ ಅವರ ಪ್ರದರ್ಶನದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿತು.
ಭಾನುವಾರ ಮಧ್ಯರಾತ್ರಿ ಪ್ರಾರಂಭವಾದ ಈ ಮ್ಯೂಸಿಕ್ ಕಾನ್ಸರ್ಟ್‌ನಲ್ಲಿ ಯುವ ಪ್ರೇಕ್ಷಕರು ಹೆಚ್ಚಾಗಿ ಆಗಮಿಸಿದ್ದರು ಎನ್ನಲಾಗಿದೆ. ಬೆಳಗಿನ ಜಾವ 3 ಗಂಟೆಗೆ (0200 GMT) ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಮೂಲಗಳು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿವೆ.
ಗಾಯಾಳುಗಳನ್ನು ಪಟ್ಟಣದ ದಕ್ಷಿಣಕ್ಕೆ ಸುಮಾರು 30 ಕಿ.ಮೀ ದೂರದಲ್ಲಿರುವ ಕೊಕಾನಿ ಮತ್ತು ಸ್ಟಿಪ್‌ನಲ್ಲಿರುವ ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಸ್ಥಳೀಯ ಮಾಧ್ಯಮಗಳು ಬೆಂಕಿ ಅವಘಡಕ್ಕೆ ಬಹುಶಃ ಪೈರೋಟೆಕ್ನಿಕ್ ಸಾಧನಗಳ ಬಳಕೆಯೇ ಕಾರಣ ಎಂದು ಊಹಿಸಿವೆ.
ಈ ಸುದ್ದಿಯನ್ನೂ ಓದಿ: Ski Resort Fire: ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ದುರಂತ; 66 ಸಾವು, 51 ಜನರಿಗೆ ಗಂಭೀರ ಗಾಯ
ಪ್ರತ್ಯೇಕ ಘಟನೆಯಲ್ಲಿ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ (Gwalior) ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. 190ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಿಸಲಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗಜ್ರಾ ರಾಜ ವೈದ್ಯಕೀಯ ಕಾಲೇಜಿನ ಭಾಗವಾಗಿರುವ ಕಮಲ ರಾಜ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ತೀವ್ರ ನಿಗಾ ಘಟಕದಲ್ಲಿ ಇಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ಗ್ವಾಲಿಯರ್‌ನ ಜಿಲ್ಲಾಧಿಕಾರಿ ರುಚಿಕಾ ಚೌಹಾಣ್ ಮಾಹಿತಿ ನೀಡಿದ್ದಾರೆ ಆಸ್ಪತ್ರೆಯ ಸಿಬ್ಬಂದಿ ತಕ್ಷಣ ಕಿಟಕಿಗಳನ್ನು ಒಡೆದು ಐಸಿಯುನಲ್ಲಿದ್ದ 13 ರೋಗಿಗಳೂ ಸೇರಿದಂತೆ ಆಸ್ಪತ್ರೆಯಲ್ಲಿದ್ದ 190ಕ್ಕೂ ಹೆಚ್ಚು ರೋಗಿಗಳನ್ನು ಸುರಕ್ಷಿತವಾಗಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.