ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pak soldiers killed: ಪಾಕಿಸ್ತಾನದಲ್ಲಿ ಬಲೂಚ್‌ ಬಂಡುಕೋರರಿಂದ ಆತ್ಮಾಹುತಿ ಬಾಂಬ್‌ ಸ್ಫೋಟ; 90 ಸೈನಿಕರು ಬಲಿ

ಕೆಲವು ದಿನಗಳ ಹಿಂದೆಯಷ್ಟೇ ಪಾಕ್‌ ಎಕ್ಸ್‌ಪ್ರೆಸ್‌ ರೈಲನ್ನು ಗುರಿಯಾಗಿಸಿ ದಾಳಿ ನಡೆಸಿ ಪ್ರಯಾಣಿಕರು ಮತ್ತು ಸೈನಿಕರನ್ನು ಒತ್ತೆಯಾಳುಗಳನ್ನಾಗಿರಿಸಿಕೊಂಡ ಘಟನೆ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ಬಲೂಚಿಸ್ತಾನದ ಬಂಡುಕೋರರು ಪಾಕಿಸ್ತಾನ ಸೇನೆಯನ್ನು ಗುರಿಯಾಗಿಸಿ ಮತ್ತೊಂದು ಡೆಡ್ಲಿ ಅಟ್ಯಾಕ್‌ ನಡೆಸಿದ್ದು, ದಾಳಿಯಲ್ಲಿ 90 ಸೈನಿಕರು ಅಸುನೀಗಿದ್ದಾರೆ.

ಆತ್ಮಾಹುತಿ ಬಾಂಬ್‌ ಸ್ಫೋಟ- ಪಾಕಿಸ್ತಾನದ 90 ಸೈನಿಕರು ಬಲಿ

Profile Rakshita Karkera Mar 16, 2025 3:00 PM

ಇಸ್ಲಮಾಬಾದ್‌: ಬಲೂಚಿಸ್ತಾನದ ಬಂಡುಕೋರರು ಪಾಕಿಸ್ತಾನ ಸೇನೆಯನ್ನು ಗುರಿಯಾಗಿಸಿ ಮತ್ತೊಂದು ಡೆಡ್ಲಿ ಅಟ್ಯಾಕ್‌(Pak soldiers killed) ನಡೆಸಿದ್ದು, ದಾಳಿಯಲ್ಲಿ 90 ಸೈನಿಕರು ಅಸುನೀಗಿದ್ದಾರೆ. ಭಾನುವಾರ ಕ್ವೆಟ್ಟಾದಿಂದ ಟಫ್ತಾನ್‌ಗೆ ಪ್ರಯಾಣಿಸುತ್ತಿದ್ದ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ಅಧಿಕೃತ ಮೂಲಗಳು ಏಳು ಸಾವುಗಳನ್ನು ದೃಢಪಡಿಸಿದೆ. ಘಟನೆಯಲ್ಲಿ 21ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ. ಆದರೆ ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, 90 ಸೈನಿಕರನ್ನು ಬಲಿ ಪಡೆದಿರುವುದಾಗಿ ಎಂದು ಹೇಳಿಕೊಂಡಿದೆ.

ಘಟನಾ ಸ್ಥಳದ ವಿಡಿಯೊ ಇಲ್ಲಿದೆ:



ಪಾಕಿಸ್ತಾನಿ ಅಧಿಕಾರಿಯೊಬ್ಬರು ನೀಡಿದ ಹೇಳಿಕೆಯಲ್ಲಿ, “ಕ್ವೆಟ್ಟಾದಿಂದ ಟಫ್ತಾನ್‌ಗೆ ಪ್ರಯಾಣಿಸುತ್ತಿದ್ದ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಲಾಯಿತು. ಏಳು ಬಸ್‌ಗಳು ಮತ್ತು ಎರಡು ವಾಹನಗಳನ್ನು ಒಳಗೊಂಡ ಬೆಂಗಾವಲು ಪಡೆಯನ್ನು ಗುರಿಯಾಗಿಸಲಾಗಿತ್ತು. ಒಂದು ಬಸ್‌ಗೆ ಐಇಡಿ ತುಂಬಿದ ವಾಹನ ಡಿಕ್ಕಿ ಹೊಡೆದಿದ್ದು, ಬಹುಶಃ ಆತ್ಮಾಹುತಿ ದಾಳಿಯಾಗಿರಬಹುದು, ಇನ್ನೊಂದು ರಾಕೆಟ್ ಚಾಲಿತ ಗ್ರೆನೇಡ್‌ಗಳಿಂದ (ಆರ್‌ಪಿಜಿ) ದಾಳಿ ನಡೆದಿದೆ. ಗಾಯಾಳುಗಳನ್ನು ಕರೆದೊಯ್ಯಲು ಸೇನಾ ವಿಮಾನಯಾನ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ ಮತ್ತು ಪ್ರದೇಶದ ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಹಾರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನದ ಬಂಡುಕೋರರ ಗುಂಪೊಂದು ಕೆಲವು ದಿನಗಳ ಹಿಂದೆ ಮಧ್ಯಾಹ್ನ ರೈಲ್ವೆ ಹಳಿಯ ಒಂದು ಭಾಗದ ಮೇಲೆ ಬಾಂಬ್ ದಾಳಿ ನಡೆಸಿ ರೈಲಿಗೆ ನುಗ್ಗಿ, ಪ್ರಯಾಣಿಕರು ಮತ್ತು ಪಾಕ್‌ ಸೈನಿಕರನ್ನು ವಶಕ್ಕೆ ಪಡೆದಿತ್ತು. ಪಾಕಿಸ್ತಾನ ವಿರೋಧಿ ಧೋರಣೆ ಹೊಂದಿರುವ ಬಲೂಚಿಸ್ತಾನದ ಬಲೂಚ್ ಲಿಬರೇಶನ್ ಆರ್ಮಿ ಉಗ್ರರು ಖೈಬರ್‌ ಕಣಿವೆಯ ಗುಡಾಲಾರ್ ಹಾಗೂ ಪಿರು ಕೊಣೇರಿ ನಡುವಿನ 8ನೇ ಸುರಂಗದ ಸನಿಹ ಸಾಗುತ್ತಿದ್ದ 9 ಕೋಚ್‌ಗಳಿದ್ದ ಜಾಫರ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಬಳಿಕ ರೈಲನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಎಲ್ಲ ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ʻಪಾಕಿಸ್ತಾನ ಸೇನಾ ಪಡೆ ಪ್ರತಿ ಕಾರ್ಯಾಚರಣೆ ಕೈಗೊಂಡಲ್ಲಿ ಪರಿಣಾಮಗಳು ತೀವ್ರವಾಗಿರಲಿವೆ. ನಮ್ಮ ವಿರುದ್ಧ ಸೇನೆ ದಂಡೆತ್ತಿ ಬಂದರೆ ಎಲ್ಲ ಒತ್ತೆಯಾಳುಗಳನ್ನು ಕೊಲ್ಲುತ್ತೇವೆ. ಮುಂದಾಗುವ ರಕ್ತಪಾತದ ಹೊಣೆಯನ್ನು ಸೇನೆಯೇ ಹೊರಬೇಕಾಗುತ್ತದೆʼಎಂದು ಬಿಎಲ್‌ಎ ಎಚ್ಚರಿಕೆ ನೀಡಿದ್ದರು. ಸದ್ಯ ರಕ್ಷಿಸಲ್ಪಟ್ಟ ಪ್ರಯಾಣಿಕರನ್ನು ಅವರ ಸ್ವಂತ ಊರುಗಳಿಗೆ, ಮಾಚ್ ಜಿಲ್ಲೆ ಮತ್ತು ಕ್ವೆಟ್ಟಾದಲ್ಲಿರುವ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.