Sheikh Hasina: ಹಸೀನಾರ ಅವಾಮಿ ಪಕ್ಷ ಬ್ಯಾನ್ ಮಾಡಿದ ಯೂನಸ್ ಸರ್ಕಾರ
ಶೇಖ್ ಹಸೀನಾರನ್ನು ವಾಪಾಸ್ ಕರೆಸಿಕೊಳ್ಳಲು ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಕೆಲವುದಿನಗಳ ಹಿಂದೆಯಷ್ಟೇ ಢಾಕಾ ನ್ಯಾಯಾಲಯವು ಆಕೆಯ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳು ಸೇರಿದಂತೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಿತ್ತು.


ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ(deposed PM Sheikh Hasina) ಅವರ ಅವಾಮಿ ಲೀಗ್ ಪಕ್ಷವನ್ನು(Awami League party) ಪ್ರಸ್ತುತ ಅಧಿಕಾರದಲ್ಲಿರುವ ಮೊಹಮ್ಮದ್ ಯೂನಸ್(Muhammad Yunus) ನೇತೃತ್ವದ ಮಧ್ಯಂತರ ಸರ್ಕಾರ ನಿಷೇಧಿಸಿದೆ. ಈ ಬಗ್ಗೆ ಯೂನಸ್‌ರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, ‘ದೇಶದ ಭದ್ರತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವ ಸಲುವಾಗಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯಲ್ಲಿ ಅವಾಮಿ ಲೀಗ್ ಮತ್ತು ಅದರ ನಾಯಕರ ವಿಚಾರಣೆ ಪೂರ್ಣಗೊಳ್ಳುವವರೆಗೆ ನಿಷೇಧವು ಜಾರಿಯಲ್ಲಿಡಲು ಸಲಹೆಗಾರರ ಮಂಡಳಿ ನಿರ್ಧರಿಸಿದೆ.
ಬಾಂಗ್ಲಾದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಅವಾಮಿ ಲೀಗ್ ನಿಷೇಧಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಹೊಸ ಪಕ್ಷವಾದ ರಾಷ್ಟ್ರೀಯ ನಾಗರಿಕ ಪಕ್ಷದ(ಎನ್‌ಸಿಪಿ) ಕಾರ್ಯಕರ್ತರು ಕೆಲ ದಿನಗಳ ಹಿಂದೆ ರ್‍ಯಾಲಿ ನಡೆಸಿದ್ದರು. ದೇಶದಲ್ಲಿ ಭುಗಿಲೆದ್ದ ವಿದ್ಯಾರ್ಥಿ ದಂಗೆಯ ಪರಿಣಾಮ 77 ವರ್ಷದ ಹಸೀನಾ, 2024ರ ಆಗಸ್ಟ್ 5ರಂದು ಬಾಂಗ್ಲಾ ತೊರೆದು ಭಾರತದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.
ಶೇಖ್ ಹಸೀನಾರನ್ನು ವಾಪಾಸ್ ಕರೆಸಿಕೊಳ್ಳಲು ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಕೆಲವುದಿನಗಳ ಹಿಂದೆಯಷ್ಟೇ ಢಾಕಾ ನ್ಯಾಯಾಲಯವು ಆಕೆಯ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳು ಸೇರಿದಂತೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಿತ್ತು. ಗಡಿಪಾರಾಗಿ ಭಾರತದಲ್ಲಿರುವ ಹಸೀನಾ ಅವರ ಧನ್ಮೊಂಡಿ ನಿವಾಸ 'ಸುದಾಸಧನ್' ಮತ್ತು ಅವರ ಕುಟುಂಬ ಸದಸ್ಯರು ಹೊಂದಿರುವ ಇತರ ಕೆಲವು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೋರ್ಟ್ ಆದೇಶ ನೀಡಿತ್ತು.
ಇದನ್ನೂ ಓದಿ Sheikh Hasina: ಶೇಖ್ ಹಸೀನಾ ವಿರುದ್ಧ ಇಂಟರ್‌ಪೋಲ್ ಮೆಟ್ಟಿಲೇರಿದ ಬಾಂಗ್ಲಾದೇಶ
ಇದೀಗ ಹಸೀನಾ ಅವರ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸುವ ಮೂಲಕ ಅವರನ್ನು ವಾಪಾಸ್ ಕರೆಸಿಕೊಳ್ಳುವ ಕೊನೆಯ ಪ್ರಯತ್ನವನ್ನು ಬಾಂಗ್ಲಾದೇಶ ಮಾಡಿದಂತಿದೆ. ಹಸೀನಾ ವಿರುದ್ಧ ಈಗಾಗಲೇ ರೆಡ್‌ಕಾರ್ನರ್ ನೊಟೀಸ್ ಜಾರಿಗೊಳಿಸುವಂತೆ ಇಂಟರ್‌ಪೋಲ್‌ಗೆ ಮನವಿ ಮಾಡಲಾಗಿದೆ.