Thursday, 12th December 2024

Bangladesh Unrest: ಬಾಂಗ್ಲಾ ಹಿಂಸಾಚಾರ; ರಾಜೀನಾಮೆ ನೀಡುವಂತೆ ಹಿಂದೂ ಶಿಕ್ಷಕರಿಗೆ ಕಿರುಕುಳ -ತಸ್ಲೀಮಾ ನಸ್ರೀನ್ ಖಂಡನೆ

Bangladesh Unrest

ಢಾಕಾ: ನೆರೆಯ ರಾಷ್ಟ್ರ ಬಾಂಗ್ಲಾದೇಶ(Bangladesh Unrest)ದಲ್ಲಿ ಕೆಲವು ತಿಂಗಳಿಂದ ಭುಗಿಲೆದ್ದಿರುವ ಹಿಂಸಾಚಾರ ದಿನೇ ದಿನೆ ಉಗ್ರ ಸ್ವರೂಪ ಪಡೆಯುತ್ತಿದೆ. ಶೇಖ್‌ ಹಸೀನಾ(Sheikh Hasina) ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅಲ್ಲಿನ ಅಲ್ಪಸ‍ಂಖ್ಯಾತ ಹಿಂದೂಗಳ ಸ್ಥಿತಿ ಚಿಂತಾಜನಕವಾಗಿದೆ. ಸಾವಿರಾರು ಹಿಂದೂಗಳನ್ನು ಗುರಿಯಾಗಿ ನಿತ್ಯ ನಿರಂತರ ದಾಳಿಗಳು ನಡೆಯುತ್ತಲೇ ಇವೆ. ಇದೀಗ  ಡಜನ್‌ಗಟ್ಟಲೇ ಹಿಂದೂ ಶಿಕ್ಷಕರನ್ನು ರಾಜೀನಾಮೆ ತಮ್ಮ ಸ್ಥಾನಕ್ಕೆ ನೀಡುವಂತೆ ಒತ್ತಾಯಿಸಲಾಗುತ್ತಿದೆ ಎಂಬ ಬಗ್ಗೆ ವರದಿಯಾಗಿದೆ.

ಈ ಕುರಿತು ಹಸೀನಾ ಅವರ ಅವಾಮಿ ಲೀಗ್ ಶನಿವಾರ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ದೇಶಾದ್ಯಂತ ಭುಗಿಲೆದ್ದಿರುವ ದಂಗೆಯ ನಡುವೆಯೇ ಕನಿಷ್ಠ 49 ಶಿಕ್ಷಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕಾದ ಸಂದರ್ಭ ಎದುರಾಗಿದೆ. ಹಸೀನಾ ರಾಜೀನಾಮೆ ಬಳಿಕ ದೇಶದಲ್ಲಿ ನಡೆಯುತ್ತಿರುವ ಜನಾಂಗೀಯ ದಾಳಿ, ದೇವಸ್ಥಾನಗಳ ಧ್ವಂಸ, ಕೊಲೆ, ಸುಲಿಗೆ ಅತ್ಯಾಚಾರ ದಿನೇ ದಿನೆ ಹೆಚ್ಚಾಗುತ್ತಿದೆ. ಹೀಗಿದ್ದರೂ ಬಾಂಗ್ಲಾದೇಶದ ಪ್ರಧಾನಿ ಮೊಹಮ್ಮದ್‌ ಯೂನಸ್‌(Muhammad Yunus) ಮೌನವಾಗಿದ್ದಾರೆ ಎಂದು ದೂರಿದೆ.

ತಸ್ಲೀಮಾ ನಸ್ರೀನ್ ಖಂಡನೆ

ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರದ ಬಗ್ಗೆ ಧ್ವನಿಯೆತ್ತಿರುವ ಪ್ರಶಸ್ತಿ ವಿಜೇತ ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್, ಹಸೀನಾ ಅವರ ಉಚ್ಚಾಟನೆಯ ನಂತರ, ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ಲೂಟಿ, ದೇವಾಲಯಗಳ ಧ್ವಂಸ, ಮನೆಗಳು ಮತ್ತು ವ್ಯಾಪಾರಗಳ ಮೇಲಿನ ದಾಳಿಗಳು ಮತ್ತು ಇತರ ಉದ್ದೇಶಿತ ಹತ್ಯೆಗಳನ್ನು ಎದುರಿಸಿದ್ದಾರೆ.  ಇದು ಸರ್ಕಾರದ ವೈಫಲ್ಯ. ಬಾಂಗ್ಲಾದೇಶದಲ್ಲಿ ಶಿಕ್ಷಕರನ್ನು ಬಲವಂತವಾಗಿ ರಾಜೀನಾಮೆ ನೀಡುವಂತೆ ಮಾಡಲಾಗುತ್ತಿದೆ. ಹಿಂದಿನ ಸರ್ಕಾರದ ಜೊತೆಗಿದ್ಗದ ಪತ್ರಕರ್ತರು, ಮಂತ್ರಿಗಳು ಮತ್ತು ಅಧಿಕಾರಿಗಳನ್ನು ಗುರಿಯಾಗಿದ ದಾಳಿ ನಡೆಸುತ್ತಿದ್ದಾರೆ. ಅಲ್ಲದೇ ಅವರ ಮೇಲೆ ನಿರಂತರ ಕಿರುಕುಳ ನಡೆಯುತ್ತಿದೆ. ಮತ್ತೆ ಕೆಲವರು ಜೈಲು ಪಾಲಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

https://x.com/albd1971/status/1829875033147392427

ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi)ಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌ಕರೆ ಮಾಡಿ ಬಾಂಗ್ಲಾದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಲಾಗಿದೆ, ಅವರು ಪ್ರಸ್ತುತ ತಲೆದೋರಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯನ್ನು ಅವರು ಭರವಸೆ ನೀಡಿದರು ಎಂದು ಹೇಳಿದ್ದಾರೆ. ಉದ್ಯೋಗ ಕೋಟಾಗಳ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ನಂತರ ಢಾಕಾದಿಂದ ದೆಹಲಿಗೆ ಪಲಾಯನ ಮಾಡಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಲಾಗಿತ್ತು. ಇದಾದ ನಂತರ ಬಾಂಗ್ಲಾದೇಶದ ಹಿಂದೂ ಸಮುದಾಯದವರ ಮೇಲೆ ದಾಳಿಗಳು ನಡೆಯುತ್ತಲೇ ಇದೆ.