Saturday, 7th September 2024

ಬಾಂಗ್ಲಾದೇಶದಲ್ಲಿ ಪ್ರತಿಭಟನೆ: 105 ಮಂದಿ ಸಾವು

ಢಾಕಾ: ಕಳೆದ ಕೆಲದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಷಯ ಸ್ಥಿತಿಗೆ ತಲುಪಿದ್ದು, ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳಿಂದ ದೇಶದ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದ್ದು, ಗಲಭೆಯಿಂದಾಗಿ ಈವರೆಗೆ 105 ಮಂದಿ ಸಾವನ್ನಪ್ಪಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಹಲವಾರು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದು ದೇಶದಲ್ಲಿ ಉಂಟಾಗಿರುವ ಗಲಭೆಯ ವಾತಾವರಣದ ದುಷ್ಪರಿಣಾಮ ನೇರವಾಗಿ ಸಾಮಾನ್ಯ ಜನರ ಬದುಕಿನ ಮೇಲೆ ತಟ್ಟಿದೆ. ಶುಕ್ರವಾರ ಕೂಡ ಬಾಂಗ್ಲಾದೇಶದಲ್ಲಿ ಘರ್ಷಣೆಗಳು ಮತ್ತು ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದಿವೆ. ಹಲವಾರು ಜನರು ನರಸಿಂಗಡಿ ಕೇಂದ್ರ ಕಾರಾ ಗೃಹದ ಮೇಲೆ ದಾಳಿ ಮಾಡಿ ನೂರಾರು ಕೈದಿಗಳನ್ನು ಹೊರಹಾಕಿದ್ದು, ನಂತರ ಅವರು ಬೆಂಕಿ ಹಚ್ಚಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನೊಂದೆಡೆ ದೇಶಾದ್ಯಂತ ನಡೆಯುತ್ತಿರುವ ಮಾರಣಾಂತಿಕ ಅಶಾಂತಿಯನ್ನು ತಡೆಯಲು ಪೊಲೀಸರು ಕೂಡ ವಿಫಲವಾಗಿದ್ದು, ಈ ಹಿನ್ನೆಲೆ ಬಾಂಗ್ಲಾದೇಶ ಶುಕ್ರವಾರ ಕರ್ಫ್ಯೂ ಮತ್ತು ಮಿಲಿಟರಿ ಪಡೆಗಳ ನಿಯೋಜನೆಯನ್ನು ಘೋಷಿಸಿತು. ಆಸ್ಪತ್ರೆಗಳು ನೀಡಿದ ವರದಿಗಳನ್ನು ಉಲ್ಲೇಖಿಸಿ AFP ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಈ ವಾರದ ಘರ್ಷಣೆಯಲ್ಲಿ ಕನಿಷ್ಠ 105 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

\

Leave a Reply

Your email address will not be published. Required fields are marked *

error: Content is protected !!