Saturday, 14th December 2024

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಇಂದು: ಗೆಲ್ಲುವ ನಿರೀಕ್ಷೆಯಲ್ಲಿ ಶೇಖ್ ಹಸೀನಾ

ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಭಾನುವಾರ ಮತದಾನ ನಡೆಯುತ್ತಿದ್ದು, ಪ್ರಮುಖ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಗೈರು ಹಾಜರಿಯಿಂದಾಗಿ ಪ್ರಧಾನಿ ಶೇಖ್ ಹಸೀನಾ ಸತತ 4ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ.

ಈ ಸಾರ್ವತ್ರಿಕ ಚುನಾವಣೆಯಲ್ಲಿ 27 ರಾಜಕೀಯ ಪಕ್ಷಗಳಿಂದ 1,500 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಭಾರತದ ಮೂವರು ವೀಕ್ಷಕರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶಿ ವೀಕ್ಷಕರು 12ನೇ ಸಾರ್ವತ್ರಿಕ ಚುನಾವಣೆಯ ಮೇಲೆ ನಿಗಾ ಇಡಲಿದ್ದಾರೆ. ಬಿಗಿ ಭದ್ರತೆಯ ನಡುವೆ ಈ ಚುನಾವಣೆ ನಡೆಯುತ್ತಿದೆ.

ಬಾಂಗ್ಲಾದೇಶದ ಮುಖ್ಯ ಚುನಾವಣಾ ಆಯುಕ್ತ ಕಾಜಿ ಹಬೀಬುಲ್ ಅವಲ್, ‘ನಮ್ಮ ಸಾರ್ವತ್ರಿಕ ಚುನಾವಣೆಗಳನ್ನು ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ನೋಡಬೇಕೆಂದು ನಾವು ಬಯಸುತ್ತೇವೆ. ಬಾಂಗ್ಲಾದೇಶ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರವಾಗಿದ್ದು, ವಿವಿಧ ಅಂತಾ ರಾಷ್ಟ್ರೀಯ ದಾಖಲೆಗಳಿಗೂ ಸಹಿ ಹಾಕಿದೆ. ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಜ.8ರಂದು ಬೆಳಗ್ಗೆ ಚುನಾವಣಾ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.