ಸನಾ: ನೂತನ ಸರ್ಕಾರದ ಸಂಪುಟದ ಸದಸ್ಯರಿದ್ದ ವಿಮಾನ ಇಳಿದ ಕೆಲವೇ ಕ್ಷಣಗಳ ನಂತರ ಯೆಮನ್‌ನ ಏಡನ್ ವಿಮಾನ ನಿಲ್ದಾಣದಲ್ಲಿ ಭಾರಿ ಸ್ಫೋಟ ಸಂಭವಿಸಿ, ಕನಿಷ್ಠ 26 ಜನರು ಮೃತಪಟ್ಟಿದ್ದಾರೆ.
ಸಚಿವ ರೆಲ್ಲರೂ ಸುರಕ್ಷಿತವಾಗಿದ್ದು, 50ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮತ್ತು ಸರ್ಕಾರಿ ಮೂಲಗಳು ತಿಳಿಸಿವೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಬಹುದು ಎನ್ನಲಾಗಿದೆ.
‘ಸರ್ಕಾರದ ಎಲ್ಲ ಸದಸ್ಯರೂ ಸುರಕ್ಷಿತವಾಗಿದ್ದಾರೆ’ ಎಂದು ಯೆಮನ್‌ನ ಪ್ರಧಾನಿ ಮೊಯೀನ್ ಅಬ್ದುಲ್‌ಮಲಿಕ್ ಸಯೀದ್ ಹೇಳಿದರು. ಸೌದಿ ಅರೇಬಿಯಾದಲ್ಲಿ ಯೆಮನ್‌ನ ರಾಷ್ಟ್ರಪತಿ ಅಬೆದ್ರಬ್ಬೊ ಮನ್ಸೂರ್ ಹಾದಿ ಅವರಿಂದ ಕೆಲ ದಿನಗಳ ಹಿಂದೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದ ಸಚಿವರು, ಏಡನ್‌ಗೆ ಆಗಮಿಸಿದ್ದರು.