ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Blast In Lahore: ಲಾಹೋರ್‌ ವಿಮಾನ ನಿಲ್ದಾಣದ ಬಳಿ ಸರಣಿ ಸ್ಪೋಟ; ಪಾಕ್‌ ಎದೆಯಲ್ಲಿ ಮತ್ತೆ ನಡುಕ

ಭಾರತ ನಡೆಸಿದ್ದ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಗೆ ಬೆಚ್ಚಿಬಿದ್ದಿರುವ ಪಾಕಿಸ್ತಾನಕ್ಕೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ, ಪಾಕಿಸ್ತಾನದ ಅತಿದೊಡ್ಡ ನಗರವಾದ ಪಂಜಾಬ್ ಪ್ರಾಂತ್ಯದ ಲಾಹೋರ್‌ನ ವಾಲ್ಟನ್ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಸರಣಿ ಸ್ಫೋಟಗಳು ಕೇಳಿಬಂದಿವೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಇಸ್ಲಾಮಾಬಾದ್‌: ಭಾರತ ನಡೆಸಿದ್ದ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಗೆ ಬೆಚ್ಚಿಬಿದ್ದಿರುವ ಪಾಕಿಸ್ತಾನಕ್ಕೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ, ಪಾಕಿಸ್ತಾನದ ಅತಿದೊಡ್ಡ ನಗರವಾದ ಪಂಜಾಬ್ ಪ್ರಾಂತ್ಯದ ಲಾಹೋರ್‌ನ ವಾಲ್ಟನ್ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಸರಣಿ ಸ್ಫೋಟಗಳು ಕೇಳಿಬಂದಿವೆ (Blast In Lahore) ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಲಾಹೋರ್‌ನ ವಾಲ್ಟನ್ ರಸ್ತೆಯಲ್ಲಿ ದೊಡ್ಡ ಸ್ಫೋಟದ ಶಬ್ದ ಕೇಳಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳೀಯ ಮಾಧ್ಯಮಗಳು ಸ್ಪೋಟದ ವಿಡಿಯೋವನ್ನು ಹಂಚಿಕೊಂಡಿದೆ. ಸ್ಪೋಟ ಸಂಭವಿಸುತ್ತಿದ್ದಂತೆ ನಗರದಲ್ಲಿ ದಟ್ಟ ಹೊಗೆ ತುಂಬಿದ್ದವು.



ವಾಲ್ಟನ್ ವಿಮಾನ ನಿಲ್ದಾಣದ ಬಳಿಯ ಗೋಪಾಲ್ ನಗರ ಮತ್ತು ನಸೀರಾಬಾದ್ ಪ್ರದೇಶಗಳಲ್ಲಿ ಹಲವಾರು ಸ್ಫೋಟಗಳು ಸಂಭವಿಸಿವೆ ಎಂದು ವರದಿಯಾಗಿದೆ, ಇದು ನಿವಾಸಿಗಳನ್ನು ಭಯಭೀತರನ್ನಾಗಿ ಮಾಡಿದೆ. ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಫೋಟದ ಸ್ವಲ್ಪ ಸಮಯದ ನಂತರ ಆ ಪ್ರದೇಶದಲ್ಲಿ ಸೈರನ್‌ಗಳು ಕೇಳಿಬಂದವು.