ಲಂಡನ್: ಕೋವಿಡ್ ಸೋಂಕಿನ ಎರಡನೇ ಹಂತದ ಅಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬ್ರಿಟನ್ ಮತ್ತೆ ಲಾಕ್ಡೌನ್ ವಿಧಿಸಿದೆ.
ನ.5 ರಂದು ಲಾಕ್ಡೌನ್ ನಾಲ್ಕು ವಾರಗಳವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. ದೇಶದ ಶಿಕ್ಷಣ ಸಂಸ್ಥೆಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ಕಲ್ಪಿಸಿದೆ. ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನ್ಯ ಮಾರ್ಗವಿಲ್ಲದೆ ಲಾಕ್ಡೌನ್ ವಿಧಿಸುತ್ತಿರುವುದಾಗಿ ಎಂದು ಸಮರ್ಥಿಸಿಕೊಂಡಿದ್ದಾರೆ.
ಕೊರೊನಾದ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ವೈದ್ಯಕೀಯ ತಜ್ಞರ ಎಚ್ಚರಿಕೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ