Sunday, 15th December 2024

ಏ.26ರಂದು ಬ್ರಿಟನ್ ಪ್ರಧಾನಿಯ ಭಾರತ ಪ್ರವಾಸ

ನವದೆಹಲಿ: ಏ.26ರಂದು ಭಾರತ ಪ್ರವಾಸ ಕೈಗೊಳ್ಳಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಭಾರತದ ಜತೆ ಹೊಸ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡುವ ನಿರೀಕ್ಷೆ ಇದೆ.

ದೆಹಲಿಗೆ ಭೇಟಿ ನೀಡುವ ಜಾನ್ಸನ್, ಮುಂಬೈ, ಪುಣೆ, ಬೆಂಗಳೂರು ಮತ್ತು ಚೆನ್ನೈಗೆ ಕೂಡಾ ಭೇಟಿ ನೀಡುವ ಸಾಧ್ಯತೆ ಇದೆ. ಈ ಭೇಟಿ ನಮ್ಮ ಆರ್ಥಿಕತೆ ಮತ್ತು ಭದ್ರತೆಗೆ ಇದು ಪ್ರಮುಖ ಎಂದು ಬ್ರಿಟನ್ ಹೇಳಿದೆ.

ಎ.26ರಂದು ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳನ್ನು ಮುಗಿಸಿ ನಾಲ್ಕು ನಗರಗಳಿಗೆ ಭೇಟಿ ನೀಡಲು ಬೋರಿಸ್ ಜಾನ್ಸನ್ ಉದ್ದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಜ. 26ರಂದು ಗಣರಾಜ್ಯೋತ್ಸವ ಪರೇಡ್‌ಗೆ ಮುಖ್ಯ ಅತಿಥಿಯಾಗಿ ಭಾಗವಹಿ ಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಕೊರೋನ ವೈರಸ್ ವ್ಯಾಪಕವಾಗಿ ಹಬ್ಬಿದ ಹಿನ್ನೆಲೆಯಲ್ಲಿ ಭೇಟಿ ರದ್ದು ಮಾಡಿದ್ದರು.