Sunday, 6th October 2024

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

ಬ್ರಿಟನ್: ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ್ದಾರೆ.
ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರು ಬ್ರಿಟನ್ ಹಣಕಾಸು ಸಚಿವರಾಗಿ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಈ ಘಟನೆ ನಡೆದಿದೆ.
ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ಬ್ರಿಟನ್ ಸರ್ಕಾರವನ್ನು ಅತಂತ್ರ ಸ್ಥಿತಿಗೆ ತಲುಪಿದ ನಂತರ ಪ್ರಧಾನಿ ಅವರ ನಿರ್ಧಾರದಿಂದ ರಾಜಕೀಯ ಬಿಕ್ಕಟ್ಟು ಕೊನೆಗೊಂಡಿದೆ.
ಜಾನ್ಸನ್ ಅವರ ಇಬ್ಬರು ಉನ್ನತ ಕ್ಯಾಬಿನೆಟ್ ಮಂತ್ರಿಗಳು ಈ ವಾರದ ಆರಂಭದಲ್ಲಿ ರಾಜೀನಾಮೆ ನೀಡಿದರು. ನಂತರ 30 ಕ್ಕೂ ಹೆಚ್ಚು ಇತರರು ಅವರ ನಾಯಕತ್ವದಲ್ಲಿ ಇನ್ನು ಮುಂದೆ ಸೇವೆ ಸಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದು ಬೋರಿಸ್ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವಂತೆ ಒತ್ತಾಯಿಸಿದರು.

ಶೀಘ್ರವೇ ನೂತನ ಪ್ರಧಾನಿ ನೇಮಕ: ಜಾನ್ಸನ್ ನಂತರ ನೂತನ ಪ್ರಧಾನಿಯನ್ನು ಆಯ್ಕೆ ಮಾಡುವ ಪ್ರಕ್ರಿಯೆ ತಕ್ಷಣವೇ ಪ್ರಾರಂಭವಾಗಲಿದೆ.