Saturday, 14th December 2024

ಢಾಕಾದಲ್ಲಿ ಸ್ಫೋಟ ಸಂಭವಿಸಿ, ಕಟ್ಟಡ ಕುಸಿತ: ಏಳು ಸಾವು, 40 ಮಂದಿಗೆ ಗಾಯ

ಢಾಕಾ: ಬಾಂಗ್ಲಾದೇಶ ರಾಜಧಾನಿ ಢಾಕಾದ ಮೊಗ್‌ಬಜಾರ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದ ನಂತರ ಕಟ್ಟಡ ಕುಸಿದು 7 ಜನರು ಮೃತಪಟ್ಟಿದ್ದಾರೆ.

ಭಾನುವಾರ ತಡರಾತ್ರಿ ಸಂಭವಿಸಿದ ಸ್ಫೋಟಕ್ಕೆ ಅನಿಲ ಸೋರಿಕೆ ಕಾರಣವಿರಬಹುದು ಎನ್ನಲಾ ಗಿದೆ. ಜೊತೆಗೆ ಘಟನೆಯಲ್ಲಿ ಪಾದಚಾರಿಗಳು ಸೇರಿದಂತೆ ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದಿಂದ ಎರಡು ಬಸ್‌ಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.

ಗಾಯಗೊಂಡವರನ್ನುಢಾಕಾ ಮೆಡಿಕಲ್ ಕಾಲೇಜ್ ಆಸ್ಪತ್ರೆ (ಡಿಎಂಸಿಎಚ್) ಮತ್ತು ಶೇಖ್ ಹಸೀನಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬರ್ನ್ ಅಂಡ್ ಪ್ಲಾಸ್ಟಿಕ್ ಸರ್ಜರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಆರು ಶವಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದರು.

ಘಟನೆಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಅಗ್ನಿಶಾಮಕ ದಳದ 13 ಘಟಕಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ಪ್ರಧಾನ ಕಚೇರಿ ಉಸ್ತುವಾರಿ ತಿಳಿಸಿದ್ದಾರೆ.