ಸುಬಾಂಗ್: ಪಶ್ಚಿಮ ಜಾವಾದ ಸುಬಾಂಗ್ ನಗರದಿಂದ ಬುಧವಾರ ಇಸ್ಲಾಮಿಕ್ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಗುಂಪನ್ನು ಕರೆದೊಯ್ಯುತ್ತಿದ್ದ ಬಸ್, ಪ್ರಾಂತ್ಯದ ತ್ಸಿಕಮಾಲೆ ಜಿಲ್ಲೆಯ ಯಾತ್ರಾ ಸ್ಥಳಕ್ಕೆ ತೆರಳುತ್ತಿದ್ದಾಗ ಕಂದಕಕ್ಕೆ ಉರುಳಿ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ 26 ಮಂದಿ ಮೃತಪಟ್ಟಿದ್ದು, ಗಾಯಗೊಂಡ 35 ಜನರನ್ನು ಆಸ್ಪತ್ರೆ ಮತ್ತು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದೆ. ಅಪಘಾತಕ್ಕೀಡಾದ ಬಸ್ ನಲ್ಲಿ ಸಿಲುಕಿರುವ ಮತ್ತೊಬ್ಬ ವ್ಯಕ್ತಿಗಾಗಿ ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.