Sunday, 8th September 2024

ಉಪಚುನಾವಣೆ: ಪಾಕಿಸ್ತಾನ್ ಮುಸ್ಲಿಂ ಲೀಗ್ ಪಕ್ಷಕ್ಕೆ ಮುಖಭಂಗ

ಸ್ಲಾಮಾಬಾದ್: ಪಾಕಿಸ್ತಾನ್ ಪ್ರಧಾನಿ ಶೆಹಬಾಝ್ ಷರೀಫ್ ನೇತೃತ್ವದ ಆಡಳಿತಾ ರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್ (ನವಾಜ್) ಪಕ್ಷ ಉಪಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದೆ.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ತೆಹ್ರೀಕ್ ಎ ಇನ್ಸಾಫ್ ಪಕ್ಷವು ಆರು ರಾಷ್ಟ್ರೀಯ ಸಂಸತ್ ಸ್ಥಾನಗಳಲ್ಲಿ ಹಾಗೂ ಪಂಜಾಬ್ ನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದೆ.

ತೆಹ್ರೀಕ್ ಎ ಇನ್ಸಾಫ್ (ಪಿಟಿಐ) ಪಕ್ಷವು ಏಳು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಒಟ್ಟು ಎಂಟು ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಪಿಟಿಐ ಏಳು ಕ್ಷೇತ್ರ ಗಳಲ್ಲಿ ಗೆಲುವು ಸಾಧಿಸಿದೆ.

ಇಮ್ರಾನ್ ನೇತೃತ್ವದ ಪಿಟಿಐ ಪಕ್ಷ ಪೇಶಾವರ, ಮರ್ದಾನ್, ಚಾರ್ ಸದ್ದಾ, ಫೈಸಲಾಬಾದ್ ಮತ್ತು ನಾನ್ಕಾನಾ ಸಾಹೀಬ್ ನಲ್ಲಿ ಆಡಳಿತಾರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ ಪಕ್ಷದ ಅಭ್ಯರ್ಥಿಗಳನ್ನು ಪರಾಜಯಗೊಳಿಸಿದೆ.

ಪಂಜಾಬ್ ವಿಧಾನಸಭಾ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ತೆಹ್ರೀಕ್ ಎ ಇನ್ಸಾಫ್ ಪಕ್ಷ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

error: Content is protected !!