Thursday, 12th December 2024

ಕ್ಯಾಲಿಪೋರ್ನಿಯಾ: ವಾಣಿಜ್ಯ ಮಳಿಗೆಯಲ್ಲಿ ಶೂಟೌಟ್, ನಾಲ್ಕು ಮಂದಿ ಸಾವು

ವಾಷಿಂಗ್ಟನ್ : ಅಮೆರಿಕಾದ ಕ್ಯಾಲಿಪೋರ್ನಿಯಾ ಆರೆಂಜ್ ನಗರದ ವಾಣಿಜ್ಯ ಮಳಿಗೆಯಲ್ಲಿ ಅಪರಿಚಿತ ವ್ಯಕ್ತಿ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಮೃತ ಪಟ್ಟಿದ್ದಾರೆ.

ವಾಣಿಜ್ಯ ಮಳಿಗೆಗೆ ನುಗ್ಗಿ ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ದಾಳಿಗೆ ಸ್ಥಳದಲ್ಲೇ ನಾಲ್ಕು ಮಂದಿ ಮೃತ ಪಟ್ಟಿದ್ದು, ಆರು ಜನರು ಗಂಭೀರವಾಗಿ ಗಾಯ ಗೊಂಡಿದ್ದಾರೆ.

ಸದ್ಯ ಪೊಲೀಸರು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿ ಸಿದ್ದು, ಗುಂಡಿನ ದಾಳಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಸದ್ಯ ಆರೋಪಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.