Sunday, 15th December 2024

ಕುವೈತ್ ನ ಮಂಗಾಫ್ ನಲ್ಲಿ ಅಗ್ನಿದುರಂತ: ಐವರು ಭಾರತೀಯರು ಸೇರಿ 53 ಮಂದಿ ಸಜೀವ ದಹನ

ಕುವೈತ್: ಕುವೈತ್ ನ ಮಂಗಾಫ್ ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ ಕನಿಷ್ಠ 53 ಮಂದಿ ಸಜೀವ ದಹನವಾಗಿದ್ದಾರೆ.

ಕುವೈತ್ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 53 ಜನರು ಮೃತಪಟ್ಟಿದ್ದು, 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸಂತಾಪ ಸೂಚಿಸಿದೆ.

“ಈ ದುರಂತದಿಂದ ನಾವು ತೀವ್ರ ಆಘಾತಕ್ಕೊಳಗಾಗಿದ್ದೇವೆ” ಎಂದು ಇಎಎಂ ಡಾ.ಎಸ್.ಜೈಶಂಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು. ಗಾಯಗೊಂಡವರು ಶೀಘ್ರ ಮತ್ತು ಸಂಪೂರ್ಣ ಚೇತರಿಸಿ ಕೊಳ್ಳಲಿ ಎಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದರು.ಘಟನೆಯ ಹಿನ್ನೆಲೆಯಲ್ಲಿ, ಕುವೈತ್ ಸರ್ಕಾರ ನಿರ್ಣಾಯಕ ಕ್ರಮ ಕೈಗೊಂಡಿದೆ. ಭವಿಷ್ಯದಲ್ಲಿ ಇಂತಹ ದುರಂತಗಳು ಸಂಭವಿಸದಂತೆ ತಡೆಯುವ ಪ್ರಯತ್ನದಲ್ಲಿ ಅಕ್ರಮ ಕಟ್ಟಡಗಳನ್ನು ದೊಡ್ಡ ಪ್ರಮಾಣದಲ್ಲಿ ನೆಲಸಮ ಮಾಡಲು ಅವರು ಆದೇಶಿಸಿದ್ದಾರೆ.